ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿದ್ದ ಸೆಕ್ಷನ್ 144 ಹಿಂತೆಗೆದುಕೊಳ್ಳಲಾಗಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ವಿಶೇಷ “ಎಸ್‍ಒಪಿ” ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,’ರಾಜ್ಯದಲ್ಲಿ ಕರೋನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ಕಫ್ರ್ಯೂ ತೆಗೆದು ಹಾಕಿ ವಿಶೇಷ ಎಸ್‍ಒಪಿ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಎರಡೂ ಡೋಸ್ ಲಸಿಕೆ ಪಡೆದಿರುವ ಅಥವಾ ಕೋವಿಡ್ ನೆಗೆಟಿವ್ ವರದಿ ಹೊಂದಿರುವವರಿಗೆ ರಾಜ್ಯದಲ್ಲಿ ಕ್ಯಾಸಿನೊ, ಸ್ಪಾ, ನೈಟ್ ಕ್ಲಬ್ ಸೇರಿದಂತೆ ವಿವಿಧ ಪ್ರವಾಸಿ ಸ್ಥಳಗಳಿಗೆ ಬೇಟಿ ನೀಡಲು ಅವಕಾಶ ನೀಡಲಾಗುತ್ತಿದೆ ‘ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ರಾಜ್ಯದ ಎಲ್ಲ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿರುವುದು ಕಂಡುಬರುತ್ತಿದೆ.