Home / ರಾಜಕೀಯ / ರಾಜ್ಯದ ಜನರ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯರಿಂದ ಸಾದ್ಯವಿಲ್ಲ: ದೇವೇಗೌಡರ ಗುಡುಗು

ರಾಜ್ಯದ ಜನರ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯರಿಂದ ಸಾದ್ಯವಿಲ್ಲ: ದೇವೇಗೌಡರ ಗುಡುಗು

Spread the love

ಜೆಡಿಎಸ್ ಅವರಿವರ ಜೊತೆ ಸೇರುವ ಪಕ್ಷ ಎಂದಿದ್ದ ಸಿದ್ದರಾಮಯ್ಯ ವಿರುದ್ಧ ನಿನ್ನೆಯಷ್ಟೇ ಟ್ವೀಟ್ ಮಾಡಿ ಗುಡುಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿಕ ಈಗ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾದ 4 ದಿನಗಳ ‘ಜನತಾ ಪರ್ವ 1.O’ ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ಮಾಜಿ ಪ್ರಧಾನಮಂತ್ರಿಗಳ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ಯಾರ ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ ಎಂದು ಹೇಳಿದ್ದಾರೆ.

ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ಗೌಡರು, ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲೀ ಉತ್ತರ ನೀಡೋಣ ಎಂದಿದ್ದಾರೆ.

ಹೈಟೆಕ್ ಕಾರ್ಯಗಾರ , ಹೊಸತನಕ್ಕೆ ಮುನ್ನುಡಿ:

ಇರುವುದು ಒಂದೇ ಪರಿಹಾರ, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ ಎನ್ನುವ ಘೋಷವಾಕ್ಯ ಹಾಗೂ 2023ಕ್ಕೇ ಜೆಡಿಎಸ್ ಎನ್ನುವ ಗುರಿಯೊಂದಿಗೆ ಆರಂಭವಾದ ಕಾರ್ಯಾಗಾರವೂ ಕರ್ನಾಟಕ ರಾಜಕೀಯದಲ್ಲಿ ಅತ್ಯಂತ ವಿಶೇಷ.

ಪಕ್ಷದ ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟತೆ ಮೂಡಿಸುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಕಣ್ಣಕ್ಕೆ ಇಳಿಯಲಿರುವ ಅಭ್ಯರ್ಥಿಗಳಿಗೆ ನಿರ್ದಿಷ್ಟ ಗುರಿಗಳನ್ನು ನಿಗದಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ತರಬೇತಿಯನ್ನು ಕೊಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಮಿಷನ್ 123 ಎಂಬ ಗುರಿಯೊಂದಿಗೆ ನಾವು ತಯಾರಿ ಆರಂಭ ಮಾಡಿದ್ದೇವೆ. ಈ ಗುರಿ ತಲುಪಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ. ಸಮರ್ಥರಾದ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸುತ್ತೇವೆ. ನಮ್ಮನ್ನು ಹಗುರವಾಗಿ ಕಾಣುವ ಕೆಲವರಿಗೆ ತಕ್ಕ ಉತ್ತರ ನೀಡುತ್ತೇವೆ. 30 ಸೀಟುಗಳ ಪಕ್ಷ ಎಂದು ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಗುಡುಗಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಇಡೀ ವೇಳೆ ಮಾಜಿ ಶಾಸಕ ವೈಎಸ್ವಿ ದತ್ತ ಅವರು ‘ ಪಕ್ಷ ಸಂಘಟನೆ ಹಾಗೂ ಪಕ್ಷದ ಪರಂಪರೆ ‘ ಎಂಬ ವಿಷಯದ ಬಗ್ಗೆ ಮಾತನಾಡಿದ್ದಾರೆ.

ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು, ಮಾಜಿ ಸಚಿವರು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ