ಮಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಹಿಂದೂ ವಿರೋಧಿಗಳಿಂದ ದೇವಸ್ಥಾನಗಳ ಮೇಲೆ ದಾಳಿ ನಡೆಯುತ್ತಿದೆ. ರಾಜ್ಯ ಸರ್ಕಾರ, ನ್ಯಾಯಾಲಯದ ಆದೇಶದ ನೆಪದಲ್ಲಿ ದೇವಸ್ಥಾನಗಳನ್ನು ತೆರವು ಮಾಡುತ್ತಿದೆ” ಎಂದು ಶ್ರೀರಾಮ ಸೇನೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ನಗರದ ಯೋಗೇಶ್ ಮುತಾ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಹೆಚ್ಚಾಗಿ ಕ್ರಿಶ್ಚಿಯನ್ ಮತಾಂತರ ನಡೆಯುತ್ತಿದ್ದು, ಮತಾಂತರದ ವಿರುದ್ದ ಹಿಂದೂ ಸಮಾಜವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಅಕ್ಟೋಬರ್ 30 ಹಾಗೂ 31ರಂದು ಗಂಗಾವತಿಯಲ್ಲಿ ಹಿಂದೂ ಸಮಾಜದ ಸಮಾವೇಶವನ್ನು ಆಯೋಜಿಸಲಾಗಿದೆ” ಎಂದಿದ್ದಾರೆ.
ಹಿಂದೂ ಧರ್ಮದ ಮೇಲೆ ಕ್ರಿಶ್ಚಿಯನ್ ಹಾಗೂ ಇಸ್ಲಾಂ ಧರ್ಮಗಳು ನಡೆಸುತ್ತಿರುವ ದಾಳಿಯನ್ನು ಖಂಡಿಸುತ್ತೇವೆ”ಅಧಿಕಾರಿಗಳು ಸರ್ಕಾರದ ನಿರ್ದೇಶನ ಪಾಲಿಸದೇ ಆದೇಶ ಮುಂದಿಟ್ಟು ದೇವಾಲಯ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಿಂದೂ ಸಂಘಟನೆಗಳೆಲ್ಲವೂ ಪ್ರತಿಭಟನೆ ನಡೆಸಿ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು ದೇವಾಲಯಗಳ ರಕ್ಷಣೆಗೆ ಮುಂದಾಗಲಿದ್ದೇವೆ” ಎಂದು ಹೇಳಿದ್ದಾರೆ.
“ಕಲಿಯುಗದಲ್ಲಿಯೂ ಅಸ್ಪೃಶ್ಯತೆ ಆಚರಣೆ ಇನ್ನೂ ಜೀವಂತವಾಗಿರುವುದು ದುರಂತ. ಇವುಗಳಿಗೆ ಆದ್ಯತೆ ನೀಡುವ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡುವ ಕಾರ್ಯ ಆಗಬೇಕು” ಎಂದಿದ್ದಾರೆ.