Breaking News

ಪ್ರತಿಭಟನೆ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಕಾಲಿನ ಮೇಲೆ ಹರಿದ ಕಾರು..!

Spread the love

ಬೆಂಗಳೂರು: ಭಾರತ್ ಬಂದ್ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ದೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರೈತ ಸಂಘಟನೆಗಳಿಂದ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದ ಗೊರಗುಂಟೆ ಪಾಳ್ಯ ಜಂಕ್ಷನ್​​ನಲ್ಲಿ ಪ್ರತಿಭಟನಾ ಜಾಥಾ ನಡೆಯುತ್ತಿತ್ತು. ಈ ವೇಳೆ ಕೆಲವು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.

ಈ ವೇಳೆ ರೈತ ಮುಖಂಡನ ಕಾರನ್ನ ಅಡ್ಡ ಹಾಕಲು ಡಿಸಿಪಿ ಧರ್ಮೇಂದ್ರ ಕುಮಾರ್​​ ಮುಂದಾಗಿದ್ದಾರೆ. ಆಗ ಕಾರು ಚಾಲಕ ಗಾಡಿಯನ್ನ ನಿಲ್ಲಿಸದೇ ಮುನ್ನುಗ್ಗಿಸಿದ್ದಾನೆ. ಇದರಿಂದ ಕಾರಿನ ಟೈರ್​ ಡಿಸಿಪಿ ಕಾಲಿನ ಮೇಲೆ ಹರಿದಿದೆ. ಕೂಡಲೇ ಎಚ್ಚೆತ್ತ ಧರ್ಮೇಂದ್ರ ಕುಮಾರ್ ತಮ್ಮ ಕಾಲನ್ನ ಎಳೆದುಕೊಂಡು ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಕಾರಿನ ಡ್ರೈವರ್​​ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಡ್ರಗ್ಸ್ ನಿರ್ಮೂಲನೆ ಒಂದೇ ವರ್ಷದಲ್ಲಿ ಮಾಡಲು ಸಾಧ್ಯವಿಲ್ಲ: ಗೃಹ ಸಚಿವ

Spread the loveಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದು ರಾಜ್ಯ ಸರ್ಕಾರದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ. ಒಂದು ವರ್ಷದಲ್ಲಿ ಡ್ರಗ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ