Breaking News

ಹಣಕಿತ್ತು ಪರಾರಿಯಾಗುತ್ತಿದ್ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. videovirel….

Spread the love

ಬೆಳಗಾವಿ ನಗರದ ಟೆಂಗಿನಕೇರಿ ಗಲ್ಲಿಯಲ್ಲಿ ವೃದ್ಧನೋರ್ವನಿಂದ ಹಣಕಿತ್ತು ಪರಾರಿಯಾಗುತ್ತಿದ್ದ ಅಪ್ರಾಪ್ತ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.

ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧನನ್ನು ಥಳಿಸಿ ಅವನಿಂದ 4000 ರೂಪಾಯಿ ಹಣವನ್ನು ಕಿತ್ತು ಪರಾರಿಯಾಗುತ್ತಿದ್ದ ನಾಲ್ವರ ಪೈಕಿ ಓರ್ವ ಅಪ್ರಾಪ್ತ ಯುವಕನನ್ನು ಸಾರ್ವಜನಿಕರೇ ಹಿಡಿದಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.

 

ದಾರಿಯಲ್ಲಿ ಹೋಗುತ್ತಿದ್ದ ವೃದ್ಧ ವ್ಯಕ್ತಿಗೆ ಈ ನಾಲ್ವರು ಗಾಂಜಾ ಕೊಡುವಂತೆ ಕೇಳಿ ಅವನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ನೋಡುತ್ತಿದ್ದ ಸಾರ್ವಜನಿಕರು ನಾಲ್ಕು ಜನರನ್ನು ಹಿಡಿಯಲು ಪ್ರಯತ್ನಿಸಿದಾಗ ಈತ ಸಿಲುಕಿಕೊಂಡಿದ್ದಾನೆ. ಇನ್ನುಳಿದ ಮೂವರು ಅಲ್ಲಿಂದ ಕಾಲುಕಿತ್ತಿದ್ದಾರೆ. ಸೆರೆಸಿಕ್ಕ ಈತನನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಈ ಘಟನೆ ಮಾರ್ಕೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಪರಾರಿಯಾದ ಮೂವರಿಗಾಗಿ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯಿಂದ ಶನಿವಾರ ಬಸವ ಜಯಂತಿ ಪೂರ್ವಭಾವಿ ಸಭೆ

Spread the loveಬೆಳಗಾವಿ: ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕವು ಬಸವ ಜಯಂತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ