Breaking News

ಕೆಪಿಸಿಸಿ ಪಟ್ಟಿ : ಹೈಕಮಾಂಡ್‌ ಜತೆ ಇಂದು ಡಿಕೆಶಿ ಚರ್ಚೆ

Spread the love

ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಮಂಗಳವಾರ ಹೈಕಮಾಂಡ್‌ ನಾಯಕರ ಜತೆ ಚರ್ಚಿಸುವ ನಿರೀಕ್ಷೆಯಿದೆ.

ರವಿವಾರ ದಿಲ್ಲಿಗೆ ತೆರಳಿರುವ ಡಿಕೆಶಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿಗೆ ಕಾಲಾವಕಾಶ ಕೋರಿದ್ದಾರೆ.

ಪಂಜಾಬ್‌ ಪ್ರವಾಸದಲ್ಲಿರುವ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮಂಗಳವಾರ ದಿಲ್ಲಿಗೆ ಆಗಮಿಸಲಿದ್ದು ಡಿಕೆಶಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.

ಕೆಪಿಸಿಸಿ ಪದಾಧಿಕಾರಿಗಳa ಪಟ್ಟಿ, ಹಿಂದುಳಿದ, ಅಲ್ಪಸಂಖ್ಯಾಕ, ಮಹಿಳಾ, ಎಸ್‌ಸಿ ವಿಭಾಗಗಳ ಅಧ್ಯಕ್ಷರ ನೇಮಕ ಸಂಬಂಧವೂ ಡಿ.ಕೆ.ಶಿವಕುಮಾರ್‌ ಚರ್ಚಿಸಿ ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ