Breaking News

ಬಡ್ಡಿ ಹಣ ಕೊಡಲಿಲ್ಲ ಎಂದು ಆಟೋ ಚಾಲಕನ ಕೊಲೆ

Spread the love

ಹುಬ್ಬಳ್ಳಿ: ಸಾಲ ನೀಡಿದ್ದ ಹಣಕ್ಕೆ ಸರಿಯಾಗಿ ಬಡ್ಡಿ ನೀಡಿಲ್ಲ ಅಂತ ಆಟೋ ಚಾಲಕನನ್ನು ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ.

ಲೋಕೇಶ್ ಹತ್ಯೆಯಾದ ಆಟೋ ಚಾಲಕರಾಗಿದ್ದು, ಕೆಲ ದಿನಗಳ ಹಿಂದೆ ಲೋಕೇಶ್​​, ಮಾರುತಿ ಎನ್ನುವವನಿಂದ 5 ರೂಪಾಯಿ ಸಾಲ ಪಡೆದುಕೊಂಡಿದ್ದ. ಆದರೆ ಸಾಲದ ಬಡ್ಡಿ ಜೊತೆಗೆ ಆಟೋದ ನಿತ್ಯ 200 ರೂಪಾಯಿ ಕೊಡುವಂತೆ ಮಾರುತಿ ಪಿಡುಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.

ಇದೇ ವಿಚಾರಕ್ಕೆ ನಿನ್ನೆ ಸಂಜೆ ಮಾರುತಿ ತನ್ನೊಂದಿಗೆ ಹುಡುಗರನ್ನು ಕರೆದುಕೊಂಡು ಬಂದು ಲೋಕೇಶ್​ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದನಂತೆ. ಈ ವೇಳೆ ಮನೆಯವರು ಹಾಗೂ ಸ್ಥಳೀಯರು ಮಾರುತಿಗೆ ಸಮಾಧಾನ ಮಾಡಿ ಸ್ಥಳದಿಂದ ಕಳುಹಿಸಿದ್ದರು ಎನ್ನಲಾಗಿದೆ. ಆದರೆ ಜಗಳದ ವೇಳೆ ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿದ್ದ ಲೋಕೇಶ್​ ಸಾವನ್ನಪ್ಪಿದ್ದ. ಈ ವಿಚಾರ ತಿಳಿಯುತ್ತಿದಂತೆ ಮಾರುತಿ ಹಾಗೂ ಆತನನೊಂದಿಗೆ ಇದ್ದ ಯುವಕರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಘಟನೆ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮಾಡಿ ಪರಾರಿಯಾಗಿರುವರ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ

Spread the love ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ