ಬೆಂಗಳೂರು: ಇಂದು 74ನೇ ಸ್ವಾತಂತ್ರ್ಯ ದಿನಾಚರಣೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ.ರಾಜ್ಯ ರಾಜಧಾನಿಯಲ್ಲಿ ಸಿಎಂ ಯಡಿಯೂರಪ್ಪ ಧ್ವಜಾರೋಹಣ ಮಾಡಲಿದ್ದಾರೆ.
ಉಳಿದ ಜಿಲ್ಲಾ ಕೇಂದ್ರಗಳಲ್ಲಿ ಸ್ಥಳೀಯ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಲಿದ್ದಾರೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ಡಿಸಿಗಳಿಂದ ಧ್ವಜಾರೋಹಣ ಆಗಲಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಗೆ ಸಿಎಂ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಧ್ವಜಾರೋಹಣ ಬಳಿಕ ರಾಷ್ಟ್ರಗೀತೆ, ನಂತರ ಮುಖ್ಯಮಂತ್ರಿ ಅವರು ಸ್ವಾತಂತ್ರ್ಯೋತ್ಸವದ ಭಾಷಣ ಮಾಡಲಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಡಿಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಡಿಸಿ ಶಿವಮೂರ್ತಿ, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್, ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಇವರ ಜೊತೆಗೆ ಸ್ಥಳೀಯ ಶಾಸಕರು ಹಾಗೂ ಕೆಲ ಪ್ರಮುಖ ಗಣ್ಯರು ಭಾಗಿಯಾಗಲಿದ್ದಾರೆ.

Laxmi News 24×7