Breaking News
Home / ರಾಜಕೀಯ / ಪೆಟ್ರೋಲ್ ಡೀಸೆಲ್ ದರ ಇಂದು ಮತ್ತೆ ಏರಿಕೆಯತ್ತ ಮುಖ ಮಾಡಿದೆ.

ಪೆಟ್ರೋಲ್ ಡೀಸೆಲ್ ದರ ಇಂದು ಮತ್ತೆ ಏರಿಕೆಯತ್ತ ಮುಖ ಮಾಡಿದೆ.

Spread the love

ನವದೆಹಲಿ, ಸೆಪ್ಟೆಂಬರ್ 28: ಸತತ ಮೂರು ವಾರಗಳಿಂದ ಯಥಾಸ್ಥಿತಿ ಕಾಪಾಡಿಕೊಂಡಿದ್ದ ಪೆಟ್ರೋಲ್ ದರವನ್ನು ಇಂದು (ಸೆ.28) ಏರಿಕೆ ಮಾಡಲಾಗಿದ್ದು, ಅದೇ ರೀತಿ ಡೀಸೆಲ್ ದರ ಇಂದು ಮತ್ತೆ ಏರಿಕೆ ಕಂಡಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದು ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20ರಿಂದ 25 ಪೈಸೆ ಹೆಚ್ಚಳ ಮಾಡಿದ್ದರೆ, ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಏರಿಕೆ ಕಾಣುತ್ತಿರುವ ಲೀಟರ್ ಡೀಸೆಲ್ ದರ 75 ಪೈಸೆ ಹೆಚ್ಚಳವಾಗಿದೆ.

ಮಂಗಳವಾರದ ಇಂಧನ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.39 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.57 ರೂಪಾಯಿಗೆ ಏರಿಕೆ ಆಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.21 ರೂಪಾಯಿಗೆ ಏರಿಕೆ ಆಗಿದೆ. ಇದೇ ವೇಳೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.87 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.62 ರೂಪಾಯಿ ಇದೆ.

ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್​ಗೆ 99.15 ರೂಪಾಯಿ ನಿಗದಿ ಆಗಿದ್ದರೆ, ಲೀಟರ್ ಡೀಸೆಲ್ ದರ 94.17 ರೂಪಾಯಿಗೆ ಏರಿಕೆ ಆಗಿದೆ. ಇನ್ನು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.06 ರೂಪಾಯಿ ಇದೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 109.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.45 ರೂಪಾಯಿ ಇದೆ.

 

ಉತ್ತರ ಪ್ರದೇಶದ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.98 ರೂಪಾಯಿಗೆ ಏರಿಕೆ ಆಗಿದೆ. ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್​ಗೆ 97.61 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.31 ರೂಪಾಯಿ ನಿಗದಿ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಕಳೆದ ಶುಕ್ರವಾರ ಲೀಟರ್ ಡೀಸೆಲ್ ದರದಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲಾಗಿತ್ತು. ಆ ಬಳಿಕ ಒಂದು ದಿನದ ನಂತರ ಭಾನುವಾರ ಮತ್ತೆ ಲೀಟರ್ ಡೀಸೆಲ್ ದರವನ್ನು ಏರಿಕೆ ಮಾಡಲಾಗಿದೆ. ಇಂದೂ ಸಹ ಡೀಸೆಲ್ ದರದಲ್ಲಿ 75 ಪೈಸೆ ಹೆಚ್ಚಳವಾಗಿದೆ. ಸತತ ಮೂರು ವಾರಗಳಿಂದ ಸ್ಥಿರತೆಯಲ್ಲಿದ್ದ ಪೆಟ್ರೋಲ್ ದರ ಸಹ ಮತ್ತೆ ಏರಿಕೆಯತ್ತ ಮುಖ ಮಾಡಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ