Breaking News

ಅಡುಗೆ ಅನಿಲ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಸರಕಾರ ಚಿಂತನೆ..?

Spread the love

ಹೊಸದಿಲ್ಲಿ: ಅಡುಗೆ ಅನಿಲ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗಂಭೀರ ಚಿಂತನೆ ನಡೆಸಿದ್ದು, ಈ ಸಂಬಂಧ ಸಮೀಕ್ಷೆಯೊಂದನ್ನು ಕೈಗೊಳ್ಳುತ್ತಿದೆ ಎಂದು ಉನ್ನತ ಮೂಲಗಳು ವರದಿ ಮಾಡಿವೆ.

ಸಬ್ಸಿಡಿಯನ್ನು ಉಜ್ವಲ ಯೋಜನೆಯ ಫ‌ಲಾನುಭವಿಗಳಿಗೆ ಸೀಮಿತಗೊಳಿಸುವ ಚಿಂತನೆಯೂ ಇದೆ ಎನ್ನಲಾಗಿದೆ. ಈ ಹಿಂದೆ ಎಲ್‌ಪಿಜಿ ದರ ಇಳಿಕೆಯಾಗಿದ್ದರಿಂದ 2020ರ ಮೇ ತಿಂಗಳಿ ನಲ್ಲಿ ಸರಕಾರವು ಎಲ್‌ಪಿಜಿ ಸಬ್ಸಿಡಿಯನ್ನು ಹಿಂದೆ ಗೆದುಕೊಂಡಿತ್ತು.

ಆಗ ದಿಲ್ಲಿಯಲ್ಲಿ 14.2 ಕೆ.ಜಿ.ಯ ಅಡುಗೆ ಅನಿಲ ಸಿಲಿಂಡರ್‌ಗೆ 581.50 ರೂ. ದರ ಇದ್ದರೆ ಈಗ ದರ ಏರಿಕೆಯಾಗಿ 884.50 ರೂ. ಇದೆ. ಈ ಹಿನ್ನೆಲೆಯಲ್ಲಿ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ