ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಗಳೂರಿನಲ್ಲ ತಾಲಿಬಾನ್ ಸರ್ಕಾರವಿದಯೇ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸನ್ಮಾನ್ಯ ಮುಖ್ಯಮಂತ್ರಿಯವರೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್ ಗಳದ್ದಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಏನಿದು ಪ್ರಕರಣ: ಒಂದೇ ವಾಹನದಲ್ಲಿ ಅನ್ಯ ಕೋಮಿನ ಯುವಕ ಯುವತಿಯರು ಒಟ್ಟಾಗಿ ಹೋದರು ಎಂಬ ಕಾರಣಕ್ಕೆ ಹಿಂದೂ ಸಂಘಟನೆ ಯುವಕರು ತಡೆದು ಪ್ರಶ್ನಿಸಿ, ನಿಂದಿಸಿದ ಆರೋಪದ ಮೇಲೆ ಐವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿರುವ ಘಟನೆ ಸುರತ್ಕಲ್ ಟೋಲ್ ಗೇಟ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿತ್ತು.
ನಗರದ ಕಾಲೇಜೊಂದರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲ್ಪೆ ಬೀಚ್ ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ ಎರಡು ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ತಡೆದು ಪ್ರಶ್ನಿಸಿ, ನಿಂದಿಸಿದ್ದಾರೆ.