Breaking News

ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆಗೆ ಸನ್ಮಾನ

Spread the love

ಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ, ಹುಬ್ಬಳ್ಳಿ ಸಾಯಿನಗರದ ಟೀಚರ್ಸ್ ಕಾಲನಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.

 

 

ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯ ಕಾರ್ಡಿನಡಿ ಲಭ್ಯವಾಗುವ ಔಷಧಗಳನ್ನು ಬೆಂಗಳೂರಿನಿಂದ ತೆಗೆದುಕೊಂಡು ಬರುವುದು ಕಷ್ಟವಾಗುತ್ತದೆ. ಕಾರ್ಡನ್ನು ಹುಬ್ಬಳ್ಳಿಗೆ ವರ್ಗಾಯಿಸುವಂತೆ ಇದೇ ವೇಳೆ ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಬೆಂಗಳೂರಿನ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಕಚೇರಿಗೆ ಸಂಪರ್ಕಿಸಿ ಕಾರ್ಡ್ ವರ್ಗಾವಣೆ ಮಾಡಿಸಿ ಕೊಡುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಪ್ರಕಾಶ್ ನಾಸಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ