Breaking News

ಹಾನಗಲ್, ಸಿಂಧಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಭಯ್ಯಾಪುರ

Spread the love

ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದ್ದು, ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಾಸಕ ಅಮರೇಗೌಡ ಭಯ್ಯಾಪುರ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಜನರು ಬಿಜೆಪಿಯ ಆಡಳಿತ ಮತ್ತು ಬೆಲೆ ಹಗರಣ, ರೈತರ ಮೇಲಿನ ದೌರ್ಜನ್ಯಕ್ಕೆ ಬೇಸತ್ತಿದ್ದಾರೆ ಎಂದು ತಿಳಿಸಿದರು.

ಹಾಗೆ ರೈತರು ಹತ್ತು ತಿಂಗಳಿಂದ ಪ್ರತಿಭಟನೆಯಲ್ಲಿ ತೊಡಗಿದ್ದು, ಸೌಹಾರ್ದಯುತವಾಗಿ ರೈತರ ಸಮಸ್ಯೆ ಬಗೆಹರಿಸಲು ಬಿಜೆಗೆ ಆಗ್ತಿಲ್ಲ ಎಂದು ಹೇಳಿದರು. ಅದಲ್ಲದೆ ಬಿಜೆಪಿ ಬರೀ ರೈತರ ಪರ ಸರ್ಕಾರ ಅಂತಾರೆ ಅಷ್ಟೇ, ರೈತರ ಬೆನ್ನೆಲುಬು ಮುರಿದ ಸರ್ಕಾರ ಅಂದರೆ ತಪ್ಪಾಗಲ್ಲ ಎಂದು ಕಿಡಿಕಾರಿದರು. ಅದಲ್ಲದೆ ಜನರು ಕಾಂಗ್ರೆಸ್ ಕಾರ್ಯಕ್ರಮ ಮೆಚ್ಚಿದ್ದಾರೆ , ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ಜನರು ಕಾಂಗ್ರೆಸ್ ಪರವಾಗಿ ಇದ್ದರು ಎಂದು ಶಾಸಕ ಅಮರೇಗೌಡ ಹೇಳಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ