Breaking News

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆ.ಡಿ.ಎಸ್ ಕಣಕ್ಕೆ!

Spread the love

ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಅಕ್ಟೋಬರ್ 30ರಂದು ನಡೆಯಲಿರುವ ಎರಡೂ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ಹಾಗೆ ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದ್ದು, ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.

ಅದಲ್ಲದೆ ನಯಾಜ್ ಅವರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ. ಹಾಗೆ ಸಿಂಧಗಿ ಕ್ಷೇತ್ರದಲ್ಲಿ ಐವರು ಟಿಕೆಟ್ ಕೇಳುತ್ತಿದ್ದಾರೆ. ಎರಡೂ ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಹಾಗೂ ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಹೋಗುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ