ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ, ಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ.
ಕ್ಯಾರಕೊಪ್ಪ ಗ್ರಾಮದ ಎನ್‌ಎಚ್ 4 ಬಳಿ ಅನಾಹುತ ಸಂಭವಿಸಿದೆ. ನಿದ್ರೆ ಮಂಪರಿನಲ್ಲಿ ಕ್ಯಾಂಟರ್ ಚಾಲಕ ಇದ್ದ. ಹೀಗಾಗಿ ದುರ್ಘಟನೆ ನಡೆದಿರಬಹುದು ಅಂತಾ ಹೇಳಲಾಗಿದೆ. ಮೃತರ ಬಗ್ಗೆ ಇನ್ನೂ ಯಾವುದೇ ಮಾಹಿತಿ ತಿಳಿದುಬಂದಿಲ್ಲ.
ಸದ್ಯ ಗಾಯಗೊಂಡಿರುವವರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನೆಡೆಸ್ತಿದ್ದಾರೆ.
Laxmi News 24×7