Breaking News
Home / ರಾಷ್ಟ್ರೀಯ / ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ………..

ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ………..

Spread the love

ನವದೆಹಲಿ: ಇಂದು 74 ಸ್ವಾತಂತ್ರ್ಯ ದಿನಾಚರಣೆ. ಕೊರೊನಾ ಭೀತಿ ನಡುವೆ ಮುನ್ನೆಚ್ಚರಿಕೆ ವಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ.

ಈ ಬಾರಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಕೆಂಪುಕೋಟೆಯನ್ನು ಮದುವಣಗಿತ್ತಿಯಂತೆ ಶೃಂಗಾರ ಮಾಡಲಾಗಿದೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಸಮಾಧಿ ರಾಜ್‍ಘಾಟ್‍ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ನಂತರ ಕೆಂಪು ಕೋಟೆಯ ಮುಖ್ಯ ದ್ವಾರಕ್ಕೆ ಆಗಮಿಸುತ್ತಿದ್ದಂತೆ ಮೂರು ಸೇನೆಯಿಂದ ಮೋದಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ನಂತರ ಮೋದಿ ಧ್ವಜಾರೋಹಣ ಮಾಡಿದರು.

ಅಲ್ಲದೇ 30ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಬಾರಿ ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಇಲ್ಲ. ಕೇವಲ ಮುಖ್ಯ ಅಥಿತಿಗಳಿಗೆ ಕುಟುಂಬಸ್ಥರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಸಾಮಾಜಿಕ ಅಂತರದಡಿ ಆಸನಗಳ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿ ಕೊಲೆ ಕೇಸ್: ನೇಹಾಳ ಜೊತೆ ಸಲುಗೆಯಲ್ಲಿರುವ ಫಯಾಜ್ ಪೋಟೋ ವೈರಲ್

Spread the love ಹುಬ್ಬಳ್ಳಿ: ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯಲ್ಲಿ ನಿನ್ನೆ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ