Breaking News

ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

Spread the love

ಬೆಂಗಳೂರು, ಸೆ.26: ಉಡುಪಿ ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಅಪ್ರಾಪ್ತರ ವಯಸ್ಸಿನ ಬಾಲಕನನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯಾಗಿ ನೇಮಿಸಿರುವ ಕ್ರಮ ಪ್ರಶ್ನಿಸಿ ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ.ಲಾತವ್ಯ ಆಚಾರ್ಯ ಹಾಗೂ ಇತರ 4 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ಬುಧವಾರ ಪ್ರಕಟಿಸಿದ್ದಾರೆ.

ಪೀಠಾಧಿಪತಿ ನೇಮಕ ವಿಚಾರದಲ್ಲಿ 800 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಮಠದ ಸಂಪ್ರದಾಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಬಾಲಕನನ್ನು ನೇಮಿಸಲಾಗಿದೆ. ಈ ರೀತಿ ಅಪ್ರಾಪ್ತ ವಯಸ್ಸಿನವರನ್ನು ನೇಮಿಸುವುದು ಕಾನೂನುಬಾಹಿರ. ಶಿರೂರು ಮಠದ ಆಡಳಿತಾತ್ಮಕ, ಆರ್ಥಿಕ, ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಸೋದೆ ಮಠಕ್ಕೆ ಯಾವುದೇ ಅಧಿಕಾರವಿಲ್ಲ. ಹೀಗಿದ್ದೂ, ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿಗಳು ಬಾಲಕನನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವುದು ಕಾನೂನುಬಾಹಿರ ಕ್ರಮ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.

ಶಿರೂರು ಮಠದ ಪೀಠಾಧಿಪತಿ ಸ್ಥಾನಕ್ಕೆ ಯಾವುದೇ ವ್ಯಕ್ತಿಯನ್ನು ನೇಮಕ ಮಾಡಲು ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರಿಗೆ ಅಧಿಕಾರವಿಲ್ಲ ಎಂದು ಘೋಷಿಸಬೇಕು. ಜತೆಗೆ ಅಪ್ರಾಪ್ತ ವಯಸ್ಸಿನವರನ್ನು ಶಿರೂರು ಮಠದ ಪೀಠಾಧಿಪತಿಯಾಗಿ ನೇಮಕ ಮಾಡಿರುವುದು ಕಾನೂನುಬಾಹಿರ ಕ್ರಮವೆಂದು ಘೋಷಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದ್ದರು.

ವಕೀಲರ ವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಪೀಠ, ಬುಧವಾರ ಪಿಐಎಲ್ ವಜಾಗೊಳಿಸಿ ಆದೇಶಿಸಿದೆ.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ