Breaking News

ಗುತ್ತಿಗೆದಾರನ ನಿರ್ಲಕ್ಷ್ಯ.. ರಸ್ತೆ ಗುಂಡಿಗೆ ಬಿದ್ದು ವ್ಯಕ್ತಿ ಸಾವು: ಗ್ರಾಮಸ್ಥರಿಂದ ಪ್ರತಿಭಟನೆ

Spread the love

ರಸ್ತೆ ಗುಂಡಿಗೆ ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್-ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಬ್ ಮಂಗಲ ನಿವಾಸಿ ಮಾದೇಶ್ ಮೃತ ವ್ಯಕ್ತಿಯಾಗಿದ್ದಾನೆ. ರಸ್ತೆ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರ ರಸ್ತೆಯಲ್ಲಿನ ಮರ ತೆರವು ಮಾಡಲು ಹೋಗಿ ಗುಂಡಿ ತೆಗೆದು ಹಾಗೆ ಬಿಟ್ಟಿದ್ದ. ಇದೀಗ ರಸ್ತೆಯಲ್ಲಿರುವ ಅದೇ ಹೊಂಡಕ್ಕೆ ಬಿದ್ದು ಮಾದೇಶ್ ಮೃತಪಟ್ಟಿದ್ದಾರೆ. ಕಳೆದ ರಾತ್ರಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ. ಇದೇ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭ ಆದಾಗಿಂದ 8ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಪದೇಪದೆ ದೂರು ನೀಡಿದರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಟೆಂಡರ್ದಾರ ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ತಹಸಿಲ್ದಾರ್ ದಿನೇಶ್ ಆಗಮಿಸಿದ್ದು, ಪೊಲೀಸರ ಜತೆಗೂಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ