Breaking News
Home / ರಾಜಕೀಯ / 2022ರ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಲಿದೆ: ನಡ್ಡಾ ವಿಶ್ವಾಸ

2022ರ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಲಿದೆ: ನಡ್ಡಾ ವಿಶ್ವಾಸ

Spread the love

ಡೆಹ್ರಾಡೂನ್‌: ಉತ್ತರಾಖಂಡ ರಾಜ್ಯದಲ್ಲಿ ‘ಡಬಲ್‌ ಎಂಜಿನ್‌’ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೊಂದಿಗೆ 2022ರ ವಿಧಾನಸಭಾ ಚುನಾವವಣೆಯಲ್ಲಿ ಬಿಜೆಪಿ ಪಕ್ಷ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರತಿಪಾದಿಸಿದರು.

ಬುಧವಾರ ವರ್ಚುವಲ್‌ ಸಭೆಯಲ್ಲಿ ಪಕ್ಷದ ಶಕ್ತಿ ಕೇಂದ್ರದ ಸಂಚಾಲಕರು ಮತ್ತು ಉಸ್ತುವಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಕ್ಷದ ಚುನಾವಣಾ ಕಾರ್ಯಗಳಲ್ಲಿ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ನಿರ್ಣಾಯಕ ಪಾತ್ರವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ತಳಮಟ್ಟದ ಕಾರ್ಯಕರ್ತರನ್ನು ಬಲವರ್ಧನೆಗೊಳಿಸುವಂತೆ ಸೂಚಿಸಿದರು.

ಬೂತ್ ಮಟ್ಟದ ಕಾರ್ಯಕರ್ತರು ಜನಸಾಮಾನ್ಯರೊಂದಿಗೆ ಸಂಪರ್ಕ ಸಾಧಿಸುವ ಜೊತೆಗೆ, ರಾಜ್ಯದಲ್ಲಿ ‘ಡಬಲ್ ಎಂಜಿನ್’ ಸರ್ಕಾರ ಕೈಗೊಂಡಿರುವ ಅಭಿವೃದ್ಧಿಕಾರ್ಯಗಳನ್ನು ದೊಡ್ಡ ಪ್ರಮಾಣದಲ್ಲಿ ಪ್ರಚಾರ ಮಾಡುವಂತೆ ನಡ್ಡಾ ಸೂಚಿಸಿದರು.

‘ಪಕ್ಷದ ಮಾಜಿ ಅಧ್ಯಕ್ಷ ಕುಶಭಾವು ಠಾಕ್ರೆ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಂತೆ ಕರೆ ನೀಡಿದ ನಡ್ಡಾ ಅವರು, ‘ಇದು ಹಿರಿಯ ನಾಯಕರಿಗೆ ಸಲ್ಲಿಸುವ ನಿಜವಾದ ಗೌರವ’ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ