ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾಗಿ ಎಂ.ಪಿ.ರೇಣುಕಾಚಾರ್ಯ ಮತ್ತು ಡಿ.ಎನ್.ಜೀವರಾಜ್ ಅವರನ್ನು ನೇಮಿಸಿ ಸರ್ಕಾರದ ಆದೇಶ ಮಾಡಿದೆ.
ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರಿಬ್ಬರೂ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲೂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದೀಗ ಅವರನ್ನು ಮತ್ತೆ ನೇಮಕ ಮಾಡಲಾಗಿದೆ.
ತಕ್ಷಣದಿಂದ ಜಾರಿಯಾಗುವಂತೆ ಮತ್ತು ಮುಂದಿನ ಆದೇಶದವರೆಗೆ ಇಬ್ಬರನ್ನೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ, ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲು ಸರ್ಕಾರ ಆದೇಶಿಸಿದೆ.
Laxmi News 24×7