ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್ ಅಪಾರ್ಟ್ಮೆಂಟ್ನಲ್ಲಿ ಕಿರುತೆರೆ ನಟಿ ಸೌಜನ್ಯ (25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಗುರುವಾರ ಬೆಳಗ್ಗೆ ದೊಡ್ಡಬೆಲೆ ಬಳಿಯ ಅಪಾರ್ಟ್ಮೆಂಟ್ನಲ್ಲಿ ತಮ್ಮ ನಿವಾಸದಲ್ಲೇ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಜನ್ಯ ಬರೆದಿಟ್ಟಿದ್ದ ಡೆತ್ನೋಟ್ ಪತ್ತೆಯಾಗಿದೆ. ಸಾವಿಗೂ ಎರಡು ದಿನ ಮೊದಲೇ ಮನದ ನೋವನ್ನ ಅಕ್ಷರಕ್ಕಿಳಿಸಿದ್ದಾರೆ. ಅಮ್ಮ-ಅಮ್ಮ ನನ್ನನ್ನು ಕ್ಷಮಿಸಿ. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುವೆ. ಸದ್ಯ ನನ್ನ ಮನಸ್ಥಿತಿ ಸರಿ ಇಲ್ಲ. ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನಾನು ಸಾವಿನ ಮನೆಗೆ ಹೋಗುತ್ತಿದ್ದೇನೆ. ಕ್ಷಮಿಸಿ ಎಂದು ಸ್ನೇಹಿತರು ಮತ್ತು ಸಹೋದರರ ಹೆಸರನ್ನೂ ಬರೆದಿದ್ದಾರೆ. ಇಂಗ್ಲಿಷ್ನಲ್ಲಿ ಬರೆದಿರುವ ಡೆತ್ನೋಟ್ 4 ಪುಟ ಇದೆ.
ಸೌಜನ್ಯ ಕೊಡಗು ಜಿಲ್ಲೆ ಕುಶಾಲನಗರ ಮೂಲದವರಾಗಿದ್ದು, ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ಚೌಕಟ್ಟು, ಫನ್ ಚಿತ್ರಗಳಲ್ಲೂ ಬಣ್ಣ ಹಚ್ಚಿದ್ದರು.
Laxmi News 24×7