Breaking News

ದೇಶಕ್ಕೆ ಸರ್‌ಎಂವಿ ಕೊಡುಗೆ ಅಪಾರ: ಸಿಇಒ ಮೊಹಮ್ಮದ್‌ ರೋಶನ್‌ ಅಭಿಮತ

Spread the love

ಹಾವೇರಿ: ಸರ್ ಎಂ. ವಿಶ್ವೇಶ್ವರಯ್ಯ ಅವರು ಕೇವಲ ಎಂಜಿನಿಯರ್‌ ಅಷ್ಟೇ ಅಲ್ಲದೇ ದೂರ ದೃಷ್ಟಿಕೋನದ ದೇಶ ಕಂಡ ಅಪ್ರತಿಮ ವ್ಯಕ್ತಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್‌ ರೋಶನ್‌ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಲೋಕೋಪಯೋಗಿ ಇಲಾಖೆ, ಪಂಚಾಯತ್‌ ರಾಜ್ ಎಂಜಿನಿಯರಿಂಗ್‌ ವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯಗಳ ಸಂಸ್ಥೆ, ಯೋಜನಾ ಅನುಷ್ಠಾನ ವಿಭಾಗ ಹಾಗೂ ಯೋಜನಾ ನಿರ್ದೇಶಕರು ನಿರ್ಮಿತಿ ಕೇಂದ್ರದ ಸಹಯೋಗದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ‘ಸಾಕ್ಷರ ಭಾರತ- ಸುಸ್ಥಿರ ಭಾರತ ಅಡಿಯಲ್ಲಿ ಎಂಜಿನಿಯರುಗಳ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ ಎಂ. ವಿಶ್ವೇಶ್ವರಯ್ಯನವರು ಮೈಸೂರು ಪ್ರಾಂತ್ಯದ ದಿವಾನರಾಗಿದ್ದ ಕಾಲದಲ್ಲಿ ಅವರು ನೀಡಿದ ಕೊಡಿಗೆ ಅಮೂಲ್ಯವಾದದ್ದು. ಜಲಾಶಯಗಳ ನಿರ್ಮಾಣ, ಕಟ್ಟಡದ ಜೊತೆ ಜೊತೆಗೆ ಭವಿಷ್ಯದ ದೃಷ್ಟಿಕೋನದ ಹಲವು ಕೈಗಾರಿಕಾ ಕೇಂದ್ರಗಳ ಉದ್ಯಮಗಳು ಇಂದಿಗೂ ನಮ್ಮ ನಾಡಿನ ಹೆಮ್ಮೆಯ ಕೊಡುಗೆಗಳಾಗಿವೆ ಎಂದು ನೆನೆದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೋಮಶೇಖರ ಮೆಳ್ಳಳ್ಳಿ ಮಾತನಾಡಿದರು. ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್ ಬಿ ವಿಶ್ವಬ್ರಾಹ್ಮಣ ಹಾಗೂ ಉಪನ್ಯಾಸಕ ಅರವಿಂದ ಐರಣಿ ಅವರು ಉಪನ್ಯಾಸ ನೀಡಿದರು.

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಸತೀಶ ಜಾಗೀರದಾರ, ಪಂಚಾಯತ್ ರಾಜ್ ಎಂಜಿನಿಯರಿಂಗ್‌ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಚನ್ನವೀರಗೌಡ ಬಸವರಾಜ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಪಪಾಲಕ ಎಂಜಿನಿಯರ್‌ ಎಂ.ಬಸನಗೌಡ, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶಕುಮಾರ್‌, ಎಂ.ವಿ ಬಳೆಗಾರ ಇದ್ದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ