Breaking News
Home / ರಾಜಕೀಯ / ಅಕ್ರಮ ಪಡಿತರ ಸಾಗಿಸುತ್ತಿದ್ದ ವಾಹನ ವಶಕ್ಕೆ

ಅಕ್ರಮ ಪಡಿತರ ಸಾಗಿಸುತ್ತಿದ್ದ ವಾಹನ ವಶಕ್ಕೆ

Spread the love

ಕುಮಾರಪಟ್ಟಣ: ಸಮೀಪದ ಕವಲೆತ್ತು ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ (ಓಮಿನಿ) ವಾಹನವನ್ನು ಗ್ರಾಮಸ್ಥರು ಪತ್ತೆಹಚ್ಚಿ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ವಶಕ್ಕೆ ಒಪ್ಪಿಸಿರುವ ಘಟನೆ ಮಂಗಳವಾರ ನಡೆದಿದೆ

ಜಾವಿದ್ ಮತ್ತು ಆತನ ತಂಡದವರು 10 ಕ್ವಿಂಟಲ್ ಪಡಿತರ ಅಕ್ಕಿ ವಾಹನಕ್ಕೆ ತುಂಬುತ್ತಿರುವ ಸಮಯದಲ್ಲಿ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅವರನ್ನು ವಾಹನ ಸಮೇತ ಕುಮಾರಪಟ್ಟಣ ಪೊಲೀಸರು ಠಾಣೆಗೆ ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ರಾಣೆಬೆನ್ನೂರು ತಾಲ್ಲೂಕ ಆಹಾರ ನಾಗರಿಕ ಸರಬರಾಜು ಇಲಾಖೆ ಆಹಾರ ನಿರೀಕ್ಷಕರಾದ ಎಂ.ಸಿ.ಮೇಗಳಮನಿ, ಸುರೇಶ್.ಆರ್.ಟಿ., ಸ್ಟೀವನ್ ಅಂಗಡಿ, ಜಾವಿದ್ ಸೇರಿದಂತೆ ಅಕ್ಕಿ ವಶಕ್ಕೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು

ಸಮೀಪದ ಕೊಡಿಯಾಲ, ಹುಲಿಕಟ್ಟಿ, ನಲವಾಗಲ, ನದಿಹರಳಹಳ್ಳಿ, ಮಾಕನೂರು, ಕರೂರು, ಚಳಗೇರಿ ಗ್ರಾಮಗಳಿಂದ ದ್ವಿಚಕ್ರ ವಾಹನಗಳಲ್ಲಿ ಅಕ್ಕಿ ಸಂಗ್ರಹಿಸಿ ಬೇರೆಡೆಗೆ ಸಾಗಿಸುತ್ತಿದ್ದಾರೆ ಗ್ರಾಮಸ್ಥರು ದೂರಿದರು.

ಹಲವು ದಿನಗಳಿಂದ ಅಕ್ರಮ ಅಕ್ಕಿ ಸಾಗಿಸುತ್ತಿದ್ದಾರೆ. ಬಡವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಕೊಡುತ್ತಿರುವ ಅಕ್ಕಿ, ಬೇಳೆ, ಸೀಮೆಎಣ್ಣೆ ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರು ದೂರಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ