Breaking News

“ನಮಗಿಲ್ಲದ ಸೌಲಭ್ಯ ಹಾಲಿವುಡ್‍ಗೆ ನೀಡುವುದು ಸರಿಯಲ್ಲ”

Spread the love

ಬೆಂಗಳೂರು,- ಕನ್ನಡದ ನೆಲ- ಜಲ, ಸವಲತ್ತುಗಳನ್ನು ಬಳಸಿಕೊಂಡು ಬೃಹತ್ತಾಗಿ ಬೆಳೆದಿರುವ ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಮೀನಾ ನಾಗಾರಾಜ್ ಅವರಿಗೆ ತಾಕೀತು ಮಾಡಿದ್ದಾರೆ.

 

ಐಟಿಬಿಟಿ ಸಂಸ್ಥೆಗಳು ಕನ್ನಡಿಗರನ್ನು ಕಡೆಗಣಿಸುತ್ತಿವೆ, ಅಲ್ಲದೆ ಕನ್ನಡಿರಿಗೆ ಸಿಗಬೇಕಾದ ಉದ್ಯೋಗಗಳು ಅನ್ಯಭಾಷಿಕರ ಪಾಲಾಗುತ್ತಿವೆ ಎಂಬ ದೂರುಗಳು ಪ್ರಾಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಕಾರದ ವತಿಯಿಂದ ಜಾಲ ಸಂಪರ್ಕ (ಆನ್‍ಲೈನ್)ದ ಮೂಲಕ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಪರಿಶೀಲನಾ ಸಭೆ ನಡೆಸಿದ ಅವರು, ಈ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಕಡೆಗಣಿಸಲಾಗುತ್ತಿರುವ ಬಗ್ಗೆ ದೂರುಗಳು ಪ್ರಾಕಾರಕ್ಕ ಬರುತ್ತಿವೆ. ಈ ಬಗ್ಗೆ ಕೂಡಲೇ ಕ್ರಮವಹಿಸಿ ಪ್ರಾಕಾರಕ್ಕೆ ವರದಿ ನೀಡುವಂತೆ ಸೂಚಿಸಿದ್ದರು.ಕೆಟಿಐಎಸ್‍ನಲ್ಲಿ ಅನ್ಯಭಾಷಿಕರು ಅಡ್ವೈಜರ್ಗಳಾಗಿ ನೇಮಕ ಗೊಂಡಿರುವುದರಿಂದ ರಾಜ್ಯ ಸರ್ಕಾರದ ಯೋಜನೆಗಳು ಹೊರಗಿನವರ ಪಾಲಾಗುತ್ತಿವೆ. ಇಂತಹ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲ. ಮುಂದೆ ಹೀಗಾಗಂತೆ ತಡೆಯಲು ಮುಂದಿನ ಹೊಸ ನೀತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖಾ ನಿರ್ದೇಶಕರಿಗೆ ಸೂಚಿಸಿದರು

ಅನಿಮೇಷನ್‍ಗೆ ಸಂಬಂಸಿದಂತೆ ಕನ್ನಡ ಚಲನಚಿತ್ರ ಕ್ಷೇತ್ರವನ್ನು ಕಡೆಗಣಿಸಲಾಗುತ್ತಿದೆ. ನಮ್ಮ ನಾಡಿನ ಸೌಲಭ್ಯವನ್ನು ಪಡೆದು ಹಾಲಿವುಡ್‍ಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಯೋಜನೆ ರೂಪಿಸಿರುವುದು ಖಂಡನೀಯ ಎಂದಿದ್ದಾರೆ.

ಅಲ್ಲದೆ 2 ವರ್ಷಗಳ ಹಿಂದೆ ನಡೆದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಪರಿಶೀಲನೆಗೆ ಸಂಬಂಸಿದಂತೆ ಯಾವುದೇ ಅನುಪಾಲನಾ ವರದಿಯನ್ನು ಇದೂವರೆಗೂ ನೀಡದೆ ಇರುವುದು ಸರಿಯಲ್ಲ. ಇಲಾಖಾ ವ್ಯಾಪ್ತಿಯ ಜಾಲತಾಣಗಳು ಕೂಡ ಇಂಗ್ಲಿಷ್‍ನಲ್ಲಿದ್ದು ಕೂಡಲೇ ಇದನ್ನು ಕನ್ನಡೀಕರಣ ಮಾಡಲು ಶೀಘ್ರವೇ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರರಾದ ಬೇಳೂರು ಸುದರ್ಶನ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಮೀನಾ ನಾಗರಾಜï, ಕನ್ನಡ ಅಭಿವೃದ್ಧಿ ಪ್ರಾಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ವೀರಶೆಟ್ಟಿ, ವೆಬ್ ಪೆÇೀರ್ಟಲ್ನ ಯೋಜನಾಕಾರಿ ಸತೀಶ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

 


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ