ಬೆಂಗಳೂರಿನಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿರುವ ರೌಡಿಗಳ ವಿರುದ್ಧ ನಿರಂತರವಾಗಿ ಸಿಸಿಬಿ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದು,ಇದೀಗ ರೌಡಿ ರಫೀ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಇನ್ನು ಬಸವೇಶ್ವರನಗರ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿರುವ ರಫೀ, 2013ರಿಂದ ತಾವರೆಕೆರೆ, ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಿರಂತರವಾಗಿ ರೌಡಿ ಚಟುವಟಿಕೆಗಳಲ್ಲಿ ತೊಡಗಿಕೊಂಡು ಒಟ್ಟು 8 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಅದಲ್ಲದೆ ರೌಡಿ ರಫೀ ಕಳೆದ ಒಂದೂವರೆ ತಿಂಗಳ ಹಿಂದೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದು, ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಲು ಹೋದಾಗ ಪಿಎಸ್‍ಗೆ ಪೆಪ್ಪರ್ ಸ್ಪ್ರೇ ಮಾಡಿ ತಪ್ಪಿಸಿಕೊಂಡಿದ್ದನು. ಹೀಗಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರೌಡಿ ರಫೀಯನ್ನು ಬಂಧಿಸಲು ಆದೇಶ ನೀಡಿದ್ದು, ಇದೀಗ ರೌಡಿ ರಫೀಯನ್ನು ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
Laxmi News 24×7