Breaking News

2ಎ ನೀಡಿದರೆ ಸನ್ಮಾನ, ಇಲ್ಲದಿದ್ದರೆ ಸತ್ಯಾಗ್ರಹ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Spread the love

ದಾವಣಗೆರೆ: ‘ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಲಾಗುವುದು. ಇಲ್ಲದೇ ಇದ್ದರೆ ಸತ್ಯಾಗ್ರಹ ಮುಂದುವರಿಸಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.

ನಗರದ ತ್ರಿಶೂಲ್‌ ಕಲಾ ಭವನದಲ್ಲಿ ಗುರುವಾರ ನಡೆದ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ ಕೊನೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪಂಚಮಸಾಲಿ ಸಮಾಜ ಎಲ್ಲರನ್ನೂ ನಂಬುವ ಸಮಾಜ. ಹಿಂದೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ನಂಬಿತ್ತು. ಅವರು ಕೈಕೊಟ್ಟರು. ಈಗ ಬಸವರಾಜ ಬೊಮ್ಮಾಯಿ ಅವರನ್ನು ನಂಬಿದ್ದೇವೆ. ಪಂಚಮಸಾಲಿ, ಗೌಡ ಲಿಂಗಾಯತ, ಮಲೇಗೌಡ, ದೀಕ್ಷಾ ಲಿಂಗಾಯತರನ್ನು ಒಳಗೊಂಡ ಈ ಸಮಾಜಕ್ಕೆ 2ಎ ನೀಡಬೇಕು. ಅ.1ರಂದು ಬೆಂಗಳೂರಿ
ನಲ್ಲಿ ಜೆ.ಎಚ್‌. ಪಟೇಲ್‌ ಜನ್ಮದಿನಾಚರಣೆ, ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲಿ ಮುಖ್ಯಮಂತ್ರಿ ಅಥವಾ ಅವರ ಪ್ರತಿನಿಧಿಗಳು ಬಂದು ಮೀಸಲಾತಿ ಬಗ್ಗೆ ಸ್ಪಷ್ಟಪಡಿಸಬೇಕು’ ಎಂದರು. ‘2ಎ ಮೀಸಲಾತಿ ನೀಡಿದರೆ ಮುಖ್ಯಮಂತ್ರಿ ಅವರನ್ನು ಕಲ್ಲುಸಕ್ಕರೆಯಲ್ಲಿ ತುಲಾಭಾರ ಮಾಡಿ ಸನ್ಮಾನಿಸಲಾಗುವುದು. ಜತೆಗೆ ಕಿತ್ತೂರು ರಾಣಿ ಚನ್ನಮ್ಮರ ಫೋಟೊ ಜತೆಗೆ ಬೊಮ್ಮಾಯಿ ಅವರ ಫೋಟೊ ಇಟ್ಟು ಗೌರವಿಸಲಾಗುವುದು’ ಎಂದರು.

‘ಇಂದೇ ಘೋಷಣೆ ಕಷ್ಟ’

‘ಮುಖ್ಯಮಂತ್ರಿ ಜತೆಗೆ ಸಂಪರ್ಕದಲ್ಲಿದ್ದೇನೆ. ಅ.1ರಂದೇ ಮೀಸಲಾತಿ ಘೋಷಣೆ ಆಗದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಅವರು ವರದಿ ನೀಡಬೇಕು. ಬಳಿಕ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲು ಸಾಧ್ಯ’ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು.


Spread the love

About Laxminews 24x7

Check Also

ಜುಲೈ ಅಂತ್ಯದವರೆಗೆ 8,69,284 ರೈತರಿಗೆ 8362 ಕೋಟಿ ರೂ ಸಾಲ ವಿತರಣೆ: ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ