Breaking News

ಸಿಎಂ ಭೇಟಿ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿ; ಪಂಚಮಸಾಲಿಗೆ 2 ಮೀಸಲಾತಿ ಚರ್ಚೆ

Spread the love

ಬೆಂಗಳೂರು: ಬಸವ ಜಯಮೃತ್ಯುಂಜಯ ಸ್ವಾಮೀಜಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಸ್ವಾಮೀಜಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಸ್ವಾಮೀಜಿ, ‘ಮೀಸಲಾತಿಗಾಗಿ ಆಗ್ರಹಿಸಿ ನಡೆಸುವ ಹೋರಾಟ ಕೈಬಿಡುವಂತೆ ಸಿಎಂ ಮನವಿ ಮಾಡಿದ್ದಾರೆ. ಅಲ್ಲದೇ ಮೀಸಲಾತಿ ವಿಚಾರವಾಗಿ ಕೆಲ ಅಂಶಗಳನ್ನು ಸಿಎಂ ಪ್ರಸ್ತಾಪಿಸಿದ್ದಾರೆ’ ಎಂದು ಹೇಳಿದ್ದಾರೆ.

ಇನ್ನು ನಮ್ಮ ಮುಂದಿನ ನಡೆ ಹಾಗೂ ಹೋರಾಟದ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಸಮುದಾಯದ ಮುಖಂಡರ ಜೊತೆ ಮತ್ತೊಮ್ಮೆ ಚರ್ಚೆ ನಡೆಸುತ್ತೇವೆ. ಜನಪ್ರತಿನಿಧಿಗಳು ಏನು ಹೇಳುತ್ತಾರೋ ಆ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ವಾಮೀಜಿ ಹೇಳಿದ್ದಾರೆ.

ಈ ಭೇಟಿ ವೇಳೆ ಮೀಸಲಾತಿ ಆಗ್ರಹಿಸಿ ಸರ್ಕಾರಕ್ಕೆ ನೀಡಲಾಗಿರುವ ಗಡುವಿನ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವೇಳೆ ಸಚಿವ ಸಿ.ಸಿ. ಪಾಟೀಲ್, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ