Breaking News

ವಿಜಯಪುರದಲ್ಲಿ ಲಘು ಭೂಕಂಪ : ಭಯಪಡುವ ಅಗತ್ಯವಿಲ್ಲ

Spread the love

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆಯ ಲಘು ಭೂಕಂಪನ ನಡೆದಿರುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಬಸವನ ಬಾಗೇವಾಡಿ ತಾಲ್ಲೂಕಿನ ಮಸೂತಿ ಗ್ರಾಮ ಪಂಚಾಯಿತಿಯ 2.5 ಕಿಮೀ ದೂರದಲ್ಲಿ 1 ಗಂಟೆ 47 ನಿಮಿಷ 06 ಸೆಕೆಂಡ್ ಗೆ ಸರಿಯಾಗಿ ಭೂಕಂಪ ಸಂಭವಿಸಿದೆ ಎಂದು ಕೆಎಸ್‌ಎನ್‌ಡಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.

ಜನರು ಯಾವುದೇ ರೀತಿಯಲ್ಲಿ ಭಯಪಡುವ ಅಗತ್ಯವಿಲ್ಲ. ಭೂಕಂಪದ ತೀವ್ರತೆಯು ತೀರಾ ಕಡಿಮೆ ಇತ್ತು ಮತ್ತು ವಿನಾಶಕಾರಿಯಾಗಿರಲಿಲ್ಲ ಎಂದು ಹೇಳಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ