Breaking News
Home / ಜಿಲ್ಲೆ / ಬೆಂಗಳೂರು / ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಯಡಿಯೂರಪ್ಪ,

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಯಡಿಯೂರಪ್ಪ,

Spread the love

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ.  ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಸೇರಿದಂತೆ 11 ಜಿಲ್ಲೆಗಳನ್ನು ಪ್ರವಾಹಪೀಡಿತ ಜಿಲ್ಲೆಗಳೆಂದು ಘೋಷಿಸಲಾಗಿದೆ. ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಯಡಿಯೂರಪ್ಪ, ಕೊರೋನಾದಿಂದ ಮೃತಪಟ್ಟ ವಾರಿಯರ್ಸ್​ಗಳಿಗೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಒಳಗಾದ ವಿವಿಧ ಕ್ಷೇತ್ರಗಳಿಗೆ 3,187 ಕೋಟಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಶ್ರಮಿಸಿದ ಎಲ್ಲರನ್ನೂ ನಾನು ಸ್ಮರಿಸುತ್ತೇನೆ  ಎಂದಿದ್ದಾರೆ.

ನೇಗಿಲಯೋಗಿ ಅನ್ನದಾತನ ರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆ. ರೈತರಿಗೆ ಕಿಸಾನ್ ಸಮ್ಮಾನ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುವುದು. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ. 2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲ ಅರ್ಹ ರೈತರಿಗೆ ಸಾಲ ನೀಡಲಾಗುವುದು. 5.82 ಲಕ್ಷ ರೈತರಿಗೆ ಸರ್ಕಾರದಿಂದ ನೆರವು ನೀಡಲಾಗುವುದು. ಕೊರೋನಾದಿಂದ ಮೃತಪಟ್ಟಿರುವವರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಅಟಲ್ ಭೂ ಜಲ ಯೋಜನೆ ಮೂಲಕ 1,200 ಕೋಟಿ ರೂ. ಅನುಮೋದನೆ ನೀಡಲಾಗಿದೆ. ರಾಜ್ಯದ 14 ಜಿಲ್ಲೆಗಳ 41 ತಾಲೂಕುಗಳ 1,199 ಗ್ರಾಮ ಪಂಚಾಯಿತಿಗಳಲ್ಲಿ 39,703 ಚದರ ಕಿ.ಮೀ. ಪ್ರದೇಶ ವ್ಯಾಪಿಸಿದೆ. ಈ ಯೋಜನೆ ಮೊದಲು ಕರ್ನಾಟಕದಲ್ಲಿ ಜಾರಿಯಾಗುತ್ತಿದೆ. ಸಮಗ್ರ ಕರ್ನಾಟಕದ ಅಭಿವೃದ್ಧಿಯೇ ನಮ್ಮ ಗುರಿ. ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಕೇವಲ ಹೆಸರು ಬದಲಾವಣೆ ಮಾತ್ರವಲ್ಲ, ಆ ಭಾಗದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ, ಕಾರವಾರ ಮತ್ತು ವಿಜಯಪುರದಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಂಚಾರದಟ್ಟಣೆಯನ್ನು ನಿವಾರಿಸಲು ಸಬ್ ಸರ್ಬನ್ ರೈಲ್ವೆ ಯೋಜನೆಗೆ ವೇಗ ನೀಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. ಸರ್ಕಾರದ ಎಲ್ಲ ಪ್ರಯತ್ನಗಳಿಗೆ ಪ್ರಧಾನಿ ಮೋದಿ ಅವರ ಸಹಕಾರವಿದೆ ಎಂದು ಸಿಎಂ ಹೇಳಿದ್ದಾರೆ.

ಸ್ವಿಜರ್ಲೆಂಡ್​ನ ದಾವೋಸ್​ನಲ್ಲಿ 40ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳ ಜೊತೆ ಮಾತುಕತೆ ರಾಜ್ಯದಲ್ಲಿ ಹೂಡಿಕೆ ಮಾಡಲು ಮನವೊಲಿಸಲಾಗಿದೆ. ಕೊರೋನಾ ಸಮಯದಲ್ಲಿ ಕೂಡ ರಾಜ್ಯಮಟ್ಟದಲ್ಲಿ 27 ಸಾವಿರ ಕೋಟಿ ರೂ. ಮೊತ್ತದ 101 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಸೇರಿದಂತೆ 11 ಜಿಲ್ಲೆಗಳನ್ನು ಪ್ರವಾಹಪೀಡಿತ ಜಿಲ್ಲೆಗಳೆಂದು ಘೋಷಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿದ್ದು, ಪರಿಸ್ಥಿತಿಯ ಅವಲೋಕನ ಹಾಗೂ ಪ್ರವಾಹ ನಿರ್ವಹಣೆ ಮಾಡುತ್ತಿದ್ದಾರೆ. ಅವರ ಜೊತೆ ನಾನು ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕೊರೋನಾ ಎಲ್ಲ ಕ್ಷೇತ್ರಗಳನ್ನೂ ಬಾಧಿಸಿದೆ. ನಾನು ಕೂಡ ಕೊರೋನಾ ಸೋಂಕಿನಿಂದ ಬಾಧಿತನಾಗಿ ಗುಣಮುಖನಾಗಿದ್ದೇನೆ. ಜನರು ಸೋಂಕಿನ ಬಗ್ಗೆ ಆತಂಕ ಪಡಬೇಕಿಲ್ಲ. ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳ್ಳಂದೂರು ಕೆರೆಗೆ 36 ಕಿ.ಮೀ. ಉದ್ದದ ಕಾಲ್ನಡಿಗೆ ಮತ್ತು ಸೈಕಲ್ ಪಥ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸಿಎಂ ಘೋಷಿಸಿದ್ದಾರೆ.

ಕೊರೋನಾ ಸೋಂಕಿನಿಂದ ಒಂದು ವಾರ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಣಮುಖರಾಗಿ ಡಿಸ್ಚಾರ್ಜ್ ಆಗಿ, ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಇದೀಗ 12 ದಿನಗಳ ಬಳಿಕ ಮನೆಯಿಂದ ಹೊರಗೆ ಬಂದಿರುವ ಸಿಎಂ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಇಂದು ಮಾಣಿಕ್ ಷಾ ಪರೇಡ್ ಮೈದಾನದ ಕಾರ್ಯಕ್ರಮ ಮುಗಿಸಿ ಸಿಎಂ ತಮ್ಮ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದ


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ