ಗುಳೇದಗುಡ್ಡ: ಈಜು ಕಲಿಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಕೊಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಟ್ನಳ್ಳಿ ಗ್ರಾಮದ ಮಲ್ಲಪ್ಪ ಬೈಲಪ್ಪ ಅಂಬಿಗೇರಿ(12) ಹಾಗೂ ಮನೋಜ್ ಮಲ್ಲಪ್ಪ ಉಪ್ಪಾರ(10) ಮೃತ ಬಾಲಕರು. ಇಂದು ಮಧ್ಯಾಹ್ನ 12 ಗಂಟೆಗೆ ಮಲಪ್ರಭಾ ನದಿಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳೀಯರೊಂದಿಗೆ ಪೋಲಿಸರು ಬಾಲಕರ ಶವಗಳನ್ನು ಹೊರಗೆ ತೆಗೆದಿದ್ದಾರೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.