Breaking News

ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

Spread the love

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಒಟ್ಟು 1242 ಹುದ್ದೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಪೈಕಿ 1021 Non-HK ಹುದ್ದೆಗಳು, 221 HK ಹುದ್ದೆಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ.

ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್‌ ಟೆಕ್ನಾಲಜಿ ವಿಷಯಗಳಿಗೆ ನೇಮಕಾತಿ ನಡೆಸಲಾಗುತ್ತದೆ.

07-10-2021ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, 06-11-2021 ರ ರಾತ್ರಿ 11-59 ಗಂಟೆವರೆಗೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ