Breaking News

ಭೂಸ್ವಾಧೀನಕ್ಕೆ ವಿರೋಧ; ಗಾಂಧಿ ವೇಷ ಧರಿಸಿ ಬೀದಿಗಿಳಿದ ಅನ್ನದಾತ; ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದ ಪೊಲೀಸರು

Spread the love

ಬೆಂಗಳೂರು: ಶಿವರಾಮ್ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ವೇಷ ಧರಿಸಿ ವಿನೂತನ ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಲಹಂಕ ತಾಲೂಕಿನ 17 ಗ್ರಾಮಗಳ ರೈತರು ಬಿಡಿಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಬಿಳಿ ಪಂಚೆ, ಶಾಲು, ಟೋಪಿ ಮತ್ತು ಕೋಲು ಹಿಡಿದು ಗಾಂಧಿ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

ಶಿವರಾಮ ಕಾರಂತ ಬಡಾವಣೆಗಾಗಿ ಬಿಡಿಎ 3,500 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲು ಮುಂದಾಗಿದೆ. ಯಲಹಂಕದ ಕೆಂಪೇಗೌಡ ವೃತ್ತದಿಂದ ಮಿನಿವಿಧಾನಸೌಧದವರೆಗೂ ಪಾದಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಮಗೊಂಡನಹಳ್ಳಿ ಬಳಿ ಪ್ರತಿಭಟನಾ ನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Spread the love ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ಕಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ