ಬೆಂಗಳೂರು: ‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
‘ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಯಾಕೆ ಟಿಕೆಟ್ ಕೊಡಲ್ಲ ‘ ಎಂದು ಪ್ರಶ್ನಿಸಿದರು.
‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ಆಕಾಂಕ್ಷಿಗಳು. ನಾವು ಯಾರಿಗೆ ಟಿಕೆಟ್ ಕೊಟ್ಟರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. 2-3 ದಿನಗಳಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಯಾರು: ಎಚ್‌ಡಿಕೆ
‘ಪರಮೇಶ್ವರ ಹೇಳಿಕೆಯ ಬಗ್ಗೆ ನಾನು ಏನೂ ಮಾತನಾಡಲ್ಲ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತೊ ಅದಕ್ಕೆ ಬದ್ಧ’ ಎಂದರು.
Laxmi News 24×7