Breaking News

ದೀದಿ ಭವಿಷ್ಯ ಇಂದೇ ನಿರ್ಧಾರ : ಭವಾನಿಪುರ ಉಪಚುನಾವಣೆ ಮತ ಎಣಿಕೆ ಆರಂಭ

Spread the love

ಕೋಲ್ಕತ್ತಾ: ಭವಾನಿಪುರದಲ್ಲಿ ದೀದಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಭಾನುವಾರ ಬೆಳಗ್ಗೆಯಿಂದ ಆರಂಭವಾಗಿದೆ.

ಕಳೆದ ಗುರುವಾರ ಮತದಾನ ನಡೆದಿದ್ದು, ಮತದಾನ ಶೇ 57ರಷ್ಟು ಮಾತ್ರ ನಡೆದಿದೆ. ಬೆಳಗ್ಗೆ 8 ಗಂಟೆಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ, ಬಿಜೆಪಿ ಯೂತ್​​ ವಿಂಗ್​​​ ಅಧ್ಯಕ್ಷೆಯಾಗಿದ್ದ ಪ್ರಿಯಾಂಕಾ ತಿಬ್ರೆವಾಲಾ ಕಣದಲ್ಲಿದ್ದಾರೆ.

ಸಿಎಂ ಮಮತಾಗೆ ‘ಮಾಡು ಇಲ್ಲವೇ ಮಡಿ’ ಪರಿಸ್ಥಿತಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. 2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ