ಕೊರೋನಾ ಆರಂಭವಾದಾಗಿನಿಂದ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರಾಗುತ್ತಿದೆ. ಕಳೆದ ಒಂದು ವರ್ಷದಿಂದ ನಿಗದಿತ ದಿನಕ್ಕೆ ವೇತನ ಸಿಗುತ್ತಿಲ್ಲ. ಜುಲೈ ತಿಂಗಳ ವೇತನವನ್ನು ಆಗಸ್ಟ್ ಕೊನೆಯ ವಾರದಲ್ಲಿ ಪಾವತಿಸಲಾಗಿತ್ತು. ಆಗಸ್ಟ್ ತಿಂಗಳ ಶೇ.50ರಷ್ಟು ವೇತನವನ್ನು ಗೌರಿ-ಗಣೇಶ ಹಬ್ಬಕ್ಕೂ ಮುನ್ನ ಬಿಡುಗಡೆಗೊಳಿಸಲಾಗಿತ್ತು. ಈಗ ಅಕ್ಟೋಬರ್ ಬಂದರೂ ಆಗಸ್ಟ್ ತಿಂಗಳ ಬಾಕಿ ಶೇ.50ರಷ್ಟುವೇತನ ನೀಡಿಲ್ಲ. ಇದೀಗ ಮಹಾಲಯ ಅಮಾವಾಸ್ಯೆ, ದಸರಾ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ನೌಕರರಿಗೆ ಹಣದ ಅಗತ್ಯವಿದೆ.
