Breaking News

ಬೆಳಗಾವಿ ಲೋಕಸಭೆಯಿಂದ ನನ್ನ ಸ್ಪರ್ಧೆ ನಿಶ್ಚಿತ : ಸತೀಶ್ ಜಾರಕಿಹೊಳಿ

Spread the love

ಚಿಕ್ಕೋಡಿ: ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ರನಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟುಹಬ್ಬವನ್ನ ಆಚರಣೆ ಮಾಡಲಾಯಿತು.

ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ, ಹುಟ್ಟುಹಬ್ಬದ ಆಚರಣೆಯಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಜನ ಪಾಲ್ಗೊಂಡಿದ್ದರು. ಅಷ್ಟೇ ಅಲ್ಲದೇ 10ಕ್ಕೂ ಹೆಚ್ಚು ಮಠಾಧೀಶರು ಸಮಾರಂಭದಲ್ಲಿ ಭಾಗವಹಿಸಿ ರಾಹುಲ್ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದರು. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿ ಅವರನ್ನ ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಈ ಅದ್ದೂರಿ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಸ್ಪರ್ಧೆ ಮಾಡುವದು ನಿಶ್ಚಿತವಾಗಿದೆ. ಈಗಿನಿಂದಲೇ ನನ್ನ ಪುತ್ರ ರಾಹುಲ್ ಹಾಗೂ ಪುತ್ರಿ ಪ್ರೀಯಾಂಕಾ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಯಮಕನಮರಡಿ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನ ತೀರ್ಮಾನ ಮಾಡಬೇಕಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕಿರಣ್ ರಜಪೂತ, ಮಹಾವೀರ ಮೊಹಿತೆ, ವಿಶ್ವಾಸ ವೈದ್ಯ, ಲಕ್ಷ್ಮಣ ಚಿಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ