Breaking News

ಕೊಲೆಗೆಡುಕ ಸರ್ಕಾರ’ – ಟ್ವೀಟ್ ಮೂಲಕ ಹೆಚ್.ಡಿ.ಕೆ ಕಿಡಿ

Spread the love

ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ, ಮಕ್ಕಳ ಆತ್ಮಹತ್ಯೆಯನ್ನು ಸರ್ಕಾರ ತಡೆಯಬಹುದಿತ್ತು. ಇದು ಕೊಲೆಗಡುಕ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ, ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು ಎಂದು ಹೇಳಿದ್ದಾರೆ.

ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ‌ ಎಂದು ಆರೋಪಿಸಿದ್ದಾರೆ.

ಹಾಗೆ ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನಹರಿಸಿ ಕೊರೊನಾ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ಸಿಎಂ ಬೊಮ್ಮಾಯಿ ಅವರನ್ನು ಒತ್ತಾಯಿಸುವುದಾಗಿ ಹೆಚ್ ಡಿ ಕೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ