Breaking News

ಲೈಂಗಿಕ ಸಂಪರ್ಕಕ್ಕೆ ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿರಾತಕ: ಮಹಿಳೆ ಸಾವು

Spread the love

ಲೈಂಗಿಕ ಸಂಪರ್ಕಕ್ಕೆ ವಿರೋಧಿಸಿದ್ದಕ್ಕೆ ವ್ಯಕ್ತಿಯೊಬ್ಬ ರಾತ್ರಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾಳೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಧ್ಯರಾತ್ರಿ ವಿವಾಹಿತ ಮಹಿಳೆ ಬಾಲಮ್ಮ ತೀವ್ರ ಗಾಯಗೊಂಡಿದ್ದು, ಸೋಮವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆರೋಪಿ ಗಂಗಾಪ್ಪ ನಾಪತ್ತೆಯಾಗಿದ್ದಾನೆ.

ಗ್ರಾಮದ ಆರೋಪಿ ಗಂಗಪ್ಪ ಹಲವು ದಿನಗಳಿಂದ ಅಕ್ರಮ ಸಂಬಂಧಕ್ಕಾಗಿ ಮಹಿಳೆ ಮೇಲೆ ಹಿಂದೆ ಬಿದ್ದಿದ್ದ. ಆದರೆ ಈತನ ಮಾತಿಗೆ ಒಪ್ಪದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ತಡರಾತ್ರಿ ಗಂಡ ಇಲ್ಲದ ಸಮಯದಲ್ಲಿ ಮತ್ತೆ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಆಕೆಯ ಮೇಲೆ ಪೈಶಾಚಿಕ ಕೃತ್ಯ ಮೆರೆದಿದ್ದಾನೆ.

ಹೊರಗಡೆ ನಿಲ್ಲಿಸಿದ್ದ ಬೈಕ್ ನಿಂದ ಪೆಟ್ರೋಲ್ ತಂದು ಮಹಿಳೆಯ ಮೇಲೆ ಹಾಕಿ ಬೆಂಕಿ ಹಚ್ಚಿದ್ದಾನೆ. ಆಕೆ ಹೊರಗಡೆ ಬರಬಾರದು ಅಂತ ಬಾಗಿಲು ಕೂಡಾ ಬಂದ್ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದ. ಮಹಿಳೆಯ ಬಹುತೇಕ ದೇಹದ ಭಾಗ ಸುಟ್ಟು ಹೋಗಿತ್ತು.

ಸುರಪುರ ತಾಲೂಕು ಆಸ್ಪತ್ರೆಯಲ್ಲಿ, ಚಿಕಿತ್ಸೆ ನೀಡಿದ ಬಳಿಕ ಮಹಿಳೆಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದ್ರೆ ಮಹಿಳೆಗೆ ಚಿಕಿತ್ಸೆ ಫಲಕಾರುಯಾಗದೆ ಕಲಬುರಗಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಇತ್ತ ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಸುರಪುರ ಪೊಲೀಸರು ಆರೋಪಿಯ ಗಂಗಪ್ಪನ ಮೇಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ