ಕೋಲಾರ: ವಿದ್ಯಾರ್ಥಿಗಳಿದ್ದ ಕಾಲೇಜು ಬಸ್ ಹಾಗೂ ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ರಭಸಕ್ಕೆ ಟ್ರಾಕ್ಟರ್ ಎರಡು ಭಾಗಗಳಾಗಿದೆ.
ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಚಾಲಕರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಲಾರದ ವಿಜಯ ಚೇತನ ಪಿಯು ಕಾಲೇಜಿಗೆ ಸೇರಿದ ಖಾಸಗೀ ಬಸ್ ಇದಾಗಿದ್ದು, ಬಸ್ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಘಟನೆ ನಡೆದ ಕೂಡಲೇ ಅಪಘಾತ ಸ್ಥಳದಿಂದ ಬಸ್ ಚಾಲಕ ಪರಾರಿಯಾಗಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದಂತಹ ಸುಮಾರು 26 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸ್ಥಳಕ್ಕೆ ವೇಮಗಲ್ ಠಾಣಾ ಪೊಲೀಸರು ಭೇಟಿ ನೀಡಿದ್ದು, ಟ್ರ್ಯಾಕ್ಟರ್ ಚಾಲಕನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.