ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತಿಂಡಿ ಕೊಡಿಸುವ ಆಮಿಷವೊಡ್ಡಿ 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ.
ಈ ಸಂಬಂಧ 30 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.
12 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯವನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.
Laxmi News 24×7