ಬೆಳಗಾವಿ: ವಿಷಾಹಾರ ಸೇವಿಸಿ ತಾಯಿ ಮತ್ತು ಮಗ ಧಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿ ಸಂಭವಿಸಿದೆ. ಭಾನುವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಯಿ ಪಾರ್ವತಿ ಮಳಗಲಿ(53), ಮಗ ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಹೊಲದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ಬಳಿಕ ತಾಯಿ-ಮಗ ಇಬ್ಬರು ಬಜ್ಜಿ ಮಾಡಿ ತಿಂದಿದ್ದರು. ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪಿದ್ದಾರೆ.

ಬಜ್ಜಿ ಮಾಡಿ ತಿಂದ ಇಬ್ಬರಿಗೂ ವಾಂತಿ ಬೇಧಿ ಶುರುವಾಗಿದೆ. ಇದರಿಂದ ತೀವ್ರ ಅಸ್ವಸ್ಥರಾದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ವೇಳೆ ಮಾರ್ಗ ಮಧ್ಯ ತಾಯಿ-ಮಗ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: FIR ಇಲ್ಲದೇ ನನ್ನನ್ನು ಗೃಹ ಬಂಧನದಲ್ಲಿರಿಸಿದೆ: ಪ್ರಿಯಾಂಕಾ ಗಾಂಧಿ ಕಿಡಿ

ನಿನ್ನೆ ಮೃತದೇಹಗಳ ಮರಣೋತ್ತರ ಪರೀಕ್ಷೆಯ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಮಾರಿಹಾಳ ಪೊಲೀಸರು ಕಾಯುತ್ತಿದ್ದಾರೆ. ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7