Home / ರಾಜಕೀಯ / ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2056 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2056 ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

ಬೆಂಗಳೂರು: ಭಾರತದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2056 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.

ಮೂರು ಹಂತಗಳಲ್ಲಿ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಅಭ್ಯರ್ಥಿಗಳು ಬ್ಯಾಂಕ್ ನ ವೆವೆಬ್ ಸೈಟ್ ಗೆ ಭೇಟಿ ಕೊಟ್ಟು ನೇಮಕಾತಿ ಅರ್ಜಿ ಸಂಪೂರ್ಣ ಪರಿಶೀಲಿಸಿ, ಅಗತ್ಯವಿರುವ ಎಲ್ಲಾ ಮಾನದಂಡಗಳನ್ನು ಪೂರ್ತಿಗೊಳಿಸಬಹುದು.

ಅಕ್ಟೋಬರ್ 5ರಿಂದ 25ರವರೆಗೆ ಆನ್ ಲೈನ್ ನಲ್ಲಿ ಮಾತ್ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. https://bank.sbi/careers ಅಥವಾ https://www.sbi.co.in/careers ವೆಬ್ ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪದವಿಗೆ ಸಮಾನ ಶಿಕ್ಷಣ ಪಡೆದಿರಬೇಕು.

ಪದವಿಯ ಅಂತಿಮ ಸೆಮಿಸ್ಟರ್ ನಲ್ಲಿ ಓದುತ್ತಿರುವವರು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ ಷರತ್ತುಗಳು ಅನ್ವಯ.

ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ ಹೊಂದಿರುವವರು ಪದವಿ ಪ್ರಮಾಣಪತ್ರ ಐಡಿಡಿ (ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ ) ಉತ್ತೀರ್ಣ ದಿನಾಂಕ ದಿಸೆಂಬರ್ 31, 2021ರಂದು ಅಥವಾ ಅದಕ್ಕಿಂತ ಮೊದಲು ಸಲ್ಲಿಸಿರಬೇಕು.

ಆನ್ ಲೈನ್ ಪ್ರಾಥಮಿಕ ಪರೀಕ್ಷೆ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ನಡೆಯಲಿದ್ದು, ಆನ್ ಲೈನ್ ನಲ್ಲಿ ಮುಖ್ಯ ಪರೀಕ್ಷೆ ಡಿಸೆಂಬರ್ ಹಾಗೂ ಸಂದರ್ಶನ 2022ರ ಫೆಬ್ರವರಿ ಎರಡನೇ ಅಥವಾ ಮೂರನೇ ವಾರ ನಡೆಯಲಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ