Breaking News

ಸಂತಸ ವ್ಯಕಪಡಿಸಿದ ಶಿವರಾಮ್ ಹೆಬ್ಬಾರ್

Spread the love

ಶಿರಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕನ್ನಡ‌ ಜಿಲ್ಲೆಗೆ ಹಲವು ರೀತಿಯ ನೆರವಿನ ಯೋಜನೆ ನೀಡಿದ್ದಕ್ಕೆ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಸಂತಸ ವ್ಯಕ್ತಪಡಿಸಿದ್ದಾರೆ‌.

ಕುಮಟಾ, ಕಾರವಾರ ಹಾಗೂ ಭಟ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಾವಳಿ ಪ್ರದೇಶದಲ್ಲಿ ಪ್ರವಾಹ ಮತ್ತು ಭಾರಿ ಅಲೆಗಳಿಂದ ಉಪ್ಪುನೀರು ಹಿಮ್ಮುಖವಾಗಿ ನುಗ್ಗುವುದನ್ನು ತಡೆಗಟ್ಟುವ ಖಾರ್​ಲ್ಯಾಂಡ್​ ಯೋಜನೆಗೆ 300 ಕೋಟಿ ರೂ‌.ಗಳ ಅಂದಾಜು ಮೊತ್ತದಲ್ಲಿ ಕಾಮಗಾರಿಗಳ ಕ್ರೀಯಾ ಯೋಜನೆಗೆ ಅನುಷ್ಠಾನಗೊಳಿಸುವುದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ.

ಶಿರಸಿ ತಾಲ್ಲೂಕಿನ ಖಾನಾಪುರ – ತಾಳಗುಪ್ಪ ರಾಜ್ಯ ಹೆದ್ದಾರಿ – 93 ರ ಶಿರಸಿ ನಗರ ಪರಿಮಿತಿಯಲ್ಲಿ ಹಾದುಹೋಗುವ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ರೂಪಾಯಿ 15 ಕೋಟಿಗಳ ಮೊತ್ತದಲ್ಲಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಉತ್ತರಕನ್ನಡ ಜಿಲ್ಲೆಗೆ ಆಗಮಿಸಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳನ್ನು ನೈಜ ಚಿತ್ರಣವನ್ನು ವೀಕ್ಷಿಸಿ ವಿಸ್ತೃತ ಅಧ್ಯಯನ ನಡೆಸಿ ಕರಾವಳಿ ಭಾಗದ ರೈತರಿಗೆ ಅತ್ಯಂತ ಅವಶ್ಯಕವಾಗಿದ ಈ ಮಹತ್ವದ ಯೋಜನೆಯನ್ನು ಅನುಮೋದಿಸಿರುವುದಕ್ಕೆ ಬಸವರಾಜ ಬೊಮ್ಮಾಯಿ ಅವರಿಗೆ, ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ‌.ಸಿ.ಮಾಧುಸ್ವಾಮಿ ಅವರಿಗೆ ಲೋಕೋಪಯೋಗಿ ಇಲಾಖೆಯ ಸಚಿವ ಸಿ.ಸಿ. ಪಾಟೀಲ್ ಅವರಿಗೆ ಜಿಲ್ಲೆಯ ಸಂಸದರು, ಎಲ್ಲಾ ಶಾಸಕರ ಹಾಗೂ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ