Breaking News

ಪಿಡಿಒನಿಂದ ರಾಷ್ಟ್ರಪತಿವರೆಗೆ RSS ಕಾರ್ಯಕರ್ತರೇ ಇರೋದು- ಹೆಚ್‍ಡಿಕೆಗೆ ಸುನೀಲ್ ಕುಮಾರ್ ತಿರುಗೇಟು

Spread the love

ಉಡುಪಿ: ದೇಶದ ನಾಗರಿಕ ಸೇವೆಯಾದ ಐಎಎಸ್ ಮತ್ತು ಐಪಿಎಸ್ ನಲ್ಲಿ 4,000 RSS ಕಾರ್ಯಕರ್ತರು ಇದ್ದಾರೆ. ದೇಶದಲ್ಲಿ ಅಧಿಕಾರ ನಡೆಸುತ್ತಿರುವುದು RSS ಎಂದಿರುವ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಇಂಧನ ಸಚಿವ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಬರೀ 4 ಸಾವಿರ ಅಲ್ಲ ಪಂಚಾಯತ್ ಪಿಡಿಒನಿಂದ ರಾಷ್ಟ್ರಪತಿ ತನಕ RSS ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ನೀವು ಹೇಳಿದ್ರಿ ಅಂತ ಈ ಕೆಲಸ ನಿಲ್ಲೋದಿಲ್ಲ, ಇನ್ನಷ್ಟು ವೇಗ ಪಡೆದುಕೊಳ್ಳುತ್ತದೆ ಎಂದು ಹೇಳಿದರು.

ಕೇವಲ 4000 ಅಲ್ಲ ಅದಕ್ಕೂ ಹೆಚ್ಚು ಜನ RSSನವರಿದ್ದಾರೆ. RSS ಒಂದು ವ್ಯಕ್ತಿಯನ್ನು ನಿರ್ಮಾಣ ಮಾಡುವ ಸಂಘಟನೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಕಲ್ಪನೆ ಇರುವ ಸಂಸ್ಥೆ RSS. ರಾಷ್ಟ್ರ ನಿರ್ಮಾಣದ ಕಲ್ಪನೆ ಇಲ್ಲದವರು ಮಾತ್ರ RSS ಅನ್ನು ವಿರೋಧಿಸುತ್ತಾರೆ. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಭಾರತ ವಿಶ್ವಕ್ಕೆ ಮಾದರಿಯಾಗಬೇಕು ಎಂದಿದ್ದರು. ಅದನ್ನು ಪ್ರಧಾನಿ ಮೋದಿ ಮಾಡುತ್ತಿದ್ದಾರೆ. ನಮ್ಮಂಥ ಅನೇಕ ವ್ಯಕ್ತಿಗಳನ್ನು RSS ತಯಾರು ಮಾಡಿದೆ. ವ್ಯಕ್ತಿತ್ವ ನಿರ್ಮಾಣ ಮಾಡಿಕೊಂಡವರು ಬೇರೆಬೇರೆ ಕ್ಷೇತ್ರದಲ್ಲಿದ್ದಾರೆ. ಸಾವಿರಾರು ಮಂದಿ ವಿವಿಧ ಕ್ಷೇತ್ರಗಳಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪಿಡಿಒ ನಿಂದ ರಾಷ್ಟ್ರಪತಿ ವರೆಗೆ RSS ಕಾರ್ಯಕರ್ತರು ಇದ್ದಾರೆ. ಎಲ್ಲರ ಮುಖಾಂತರ ರಾಷ್ಟ್ರ ನಿರ್ಮಾಣ ಮಾಡುವ ಗುರಿ ಆ ಸಂಸ್ಥೆಗೆ ಇದೆ. ರಾಷ್ಟ್ರ ನಿರ್ಮಾಣದ ಪರ ಇರುವವರು ಇದನ್ನು ಸ್ವಾಗತಿಸುತ್ತಾರೆ. ರಾಷ್ಟ್ರ ನಿರ್ಮಾಣದ ಕನಸು ಇಲ್ಲದವರು ವಿರೋಧಿಸುತ್ತಾರೆ. ಈ ರೀತಿ ಮಾತನಾಡುವವರ ಬಗ್ಗೆ ಅನುಕಂಪವಿದೆ. ಭಾರತ ವಿಶ್ವಕ್ಕೆ ಮಾರ್ಗದರ್ಶನ ಮಾಡಬೇಕೆಂದು ಕಲಾಂ ಬಯಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಆ ಸಾಧನೆ ಮಾಡುತ್ತಿದ್ದಾರೆ. ಅವರೂ RSS ಕಾರ್ಯಕರ್ತ. ಭಾರತ ನಂಬರ್ 1 ಆಗಲು ವ್ಯಕ್ತಿ ನಿರ್ಮಾಣವಾಗಬೇಕು ಎಂದು ಸುನೀಲ್ ಕುಮಾರ್ ಹೇಳಿದರು.

ವ್ಯಕ್ತಿ ನಿರ್ಮಾಣ ಮಾಡುವ ಏಕೈಕ ಸಂಘಟನೆ RSS. ಅಪ್ಪ ಮಕ್ಕಳು ಬೇರೆ ಬೇರೆ ಸಂದರ್ಭದಲ್ಲಿ ಬೇರೆ-ಬೇರೆ ರೀತಿ ಮಾತನಾಡುತ್ತಾರೆ. RSS ಹೆಸರನ್ನು ಬೇಕಾದಂತೆ ಬಳಸಿಕೊಂಡಿದ್ದಾರೆ. ಅವರಿಗೆ ಬೇಕಾದಂತೆ ಬಳಸಿಕೊಳ್ಳುವ ಸಂಘಟನೆ RSS ಅಲ್ಲ. ಕುಮಾರಸ್ವಾಮಿ ಹೇಳಿದರು ಅಂತ ಈ ಕೆಲಸ ನಿಲ್ಲೋದಿಲ್ಲ. ಈ ಕೆಲಸ ಇನ್ನಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಕುಮಾರಸ್ವಾಮಿ ಗೆ ಸುನೀಲ್ ಕುಮಾರ್ ತಿರುಗೇಟು ಕೊಟ್ಟರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ