Breaking News

ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

Spread the love

ರನ್ನ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಆಗ್ರಹಿಸಿ,ಕಳೆದ 72 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಯು ಇಂದು ತೀವ್ರ ಸ್ವರೂಪಕ್ಕೆ ಪಡೆದುಕೊಂಡ ಘಟನೆ ಬಾಗಲಕೋಟ ಜಿಲ್ಲೆಯ ಮುದೋಳ ಪಟ್ಟಣದಲ್ಲಿ ಜರುಗಿದೆ ,ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಇದನ್ನು ತಡೆಯಲು ಪೊಲೀಸ್ ಬಿಗಿ ಭದ್ರತಾ ಏರ್ಪಡಿಸಿದ್ದ ರಿಂದ ಕೆಲ ಸಮಯ ಗೊಂದಲಮಯ ವಾತಾವರಣ ಉಂಟಾಗಿತು.

ಸಚಿವ ಕಾರಜೋಳ ಮನೆಗೆ ಮುತ್ತಿಗೆ ಹಾಕಲು ಹೊರಟ ರನ್ನ ಸಕ್ಕರೆ ಕಾಖಾ೯ನೆ ಕಾರ್ಮಿಕರು & ರೈತರನ್ನು ಪೊಲೀಸರು ಅಡ್ಡಗಟ್ಟಿದರು.

ಅಡ್ಡ ಹಾಕಿದ ಬ್ಯಾರಿಕೇಡ್​ ಕಿತ್ತೊಗೆದು ಪ್ರತಿಭಟನಾ ಮೆರವಣಿಗೆಗೆ ಮುಂದಾದರು.
ಈ ಸಮಯದಲ್ಲಿ ರೈತರು ಮತ್ತು ಕಾರ್ಮಿಕರನ್ನ ತಡೆದ ಪೋಲಿಸರೊಂದಿಗೆ ವಾಗ್ವಾದ ನಡೆಯಿತು.ಹಾಕಿದ್ದ ಬ್ಯಾರಿಕೇಡ್​ ಕಿತ್ತು ಹಾಕಿ ಮುತ್ತಿಗೆ ಹಾಕಲು ಯತ್ನಿಸಿದರು.ಪ್ರತಿಭಟನಾಕಾರರನ್ನು ತಡೆಯಲು ಪೋಲಿಸರು ಹರಸಾಹಸ ಪಟ್ಟರು,ಹೆಚ್ಚುವರಿ ಪೋಲಿಸ ನಿಯೋಜನೆ ಮಾಡಿದ್ದರು ಸಹ,ಸಚಿವರ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಮೆರವಣಿಗೆ ತಡೆಯುತ್ತಲೇ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ಮುಂದುವರೆಸಿದರು.ಈ ಸಂದರ್ಭದಲ್ಲಿ ವಿಜಯಪುರ ಬೆಳಗಾವಿ ರಾಜ್ಯ ಹೆದ್ದಾರಿ ರಸ್ತೆ ಬಂದ್​ ಮಾಡಿ ಪ್ರತಿಭಟನೆ ಮಾಡುತ್ತಿರುವ ಪರಿಣಾಮ ಪ್ರಯಾಣಿಕರು, ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಯಿತು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ