ರಾಯಚೂರು: ರಾಜ್ಯಕ್ಕೆ ಶೇ 45 ರಷ್ಟು ವಿದ್ಯುತ್ ನೀಡುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರತೆಯಾಗಿದ್ದು ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗುವ ಸಾಧ್ಯತೆ ಇದೆ.
ಕಲ್ಲಿದ್ದಲು ಕೊರತೆಯ ಕರಿನೆರಳು ಆರ್ಟಿಪಿಎಸ್ ವಿದ್ಯುತ್ ಉತ್ಪಾದನೆ ಮೇಲೆ ಬಿದ್ದಿದೆ. ಎಂಟು ಘಟಕಗಳಿಂದ ಉಷ್ಣ ವಿದ್ಯುತ್ ಉತ್ಪಾದನೆ 1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿದೆ. ಕಲ್ಲಿದ್ದಲು ಕೊರತೆಯಿಂದ ಈಗಾಗಲೇ ನಾಲ್ಕು ಘಟಕಗಳು ಉತ್ಪಾದನೆ ನಿಲ್ಲಿಸಿವೆ.
ಕೇವಲ 4 ಘಟಕಗಳಿಂದ 480 ರಿಂದ 500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಇಂದಿಗೆ 12,010 ಮೆಟ್ರಿಕ್ ಟನ್ ಕಲ್ಲಿದ್ದಲು ಮಾತ್ರ ಸ್ಟಾಕ್ ಇದ್ದು, ನಾಲ್ಕು ಘಟಕಗಳಿಕೆ ಇಂದಿಗೆ ಮಾತ್ರ ಸಾಕಾಗಲಿದೆ. ಎಂಟು ಘಟಕಗಳಿಂದ ವಿದ್ಯುತ್ ಉತ್ಪಾದನೆಗೆ 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಬೇಕು. ಸಿಂಗರೇಣಿ, ಮಹಾನದಿ ಮತ್ತು ವೆಸ್ಟರ್ನ್ ಕೋಲ್ ಗಣಿಯಿಂದ ದಿನಕ್ಕೆ 8 ರಿಂದ 9 ರೇಕು ಕಲ್ಲಿದ್ದಲು ಬರ್ತಾ ಇತ್ತು. ಪ್ರಸ್ತುತ ಕೇವಲ 3 ರಿಂದ 4 ರೇಕು ಕಲ್ಲಿದ್ದಲು ಬರ್ತಿದೆ. ನಾಳೆ ಈಗ ವಿದ್ಯುತ್ ಉತ್ಪಾದಿಸುತ್ತಿರುವ 4 ಘಟಕಗಳು ಬಂದ್ ಆಗುವ ಆತಂಕ ಎದುರಾಗಿದೆ. ಇನ್ನೂ ವೈಟಿಪಿಎಸ್ ಒಂದೇ ಘಟಕದಿಂದ ವಿದ್ಯುತ್ ಉತ್ಪಾದನೆಯಾಗುತ್ತಿದೆ. 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಸ್ಟಾಕ್ ಇದ್ದು, ಎರಡು ದಿನಕ್ಕೆ ಮಾತ್ರ ಸಾಕಾಗಲಿದೆ ಎಂದು ಹೇಳಲಾಗಿದೆ.