Breaking News

ಕಾರು ಪಲ್ಟಿ : ಮಹಿಳೆಯರಿಬ್ಬರ ದುರ್ಮರಣ, ಮೂವರಿಗೆ ಗಂಭೀರ ಗಾಯ

Spread the love

ಹಳಿಯಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗಳಾಗಿರುವ ದುರ್ಘಟನೆ ಹಳಿಯಾಳ-ಯಲ್ಲಾಪುರ ರಾಜ್ಯ ಹೆದ್ದಾರಿಯ ಭಾಗವತಿ ಕ್ರಾಸ್ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮೃತರು ಕೊಲ್ಲಾಪುರದ ರಮಾನಂದ ನಗರದ ಮೀನಾ ಗಣೇಶ ಪಿಳೈ(55) ಮತ್ತು ರಾಜಮ್ಮ ಪಿಳೈ(35) ಎನ್ನುವವರಾಗಿದ್ದು, ಗಣೇಶ ಪಿಳೈ, ಸರಸ್ವತಿ ಪಿಳೈ ಮತ್ತು ರಾಧಾಕೃಷ್ಣ ಪಿಳೈ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದಿಂದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಸಂಬಂಧಿಕರ ಮನೆಗೆ ಮಹಾಲಯ ಅಮವಾಸ್ಯೆಯ ದಿನದ ಶ್ರಾದ್ದ ಕಾರ್ಯಕ್ಕೆ ತೆರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.

ಘಟನೆ ನಡೆದ ತಕ್ಷಣ ಭಾಗವತಿ ಗ್ರಾಮದ ಸಮಾಜ ಸೇವಕ ಅರ್ಜುನ ಬೋವಿ ಅವರು ಸ್ಥಳಕ್ಕೆ ದೌಡಾಯಿಸಿ ಗ್ರಾಮಸ್ಥರ ಸಹಕಾರದೊಂದಿಗೆ ಕಾರನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹಾಗೂ ಮೃತ ದೇಹಗಳನ್ನು ಹೊರ ತೆಗೆದು ಅಂಬ್ಯೂಲೆನ್ಸ್ ಮೂಲಕ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೆರವಾದರು.

ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ಮೋತಿಲಾಲ್ ಪವಾರ್, ಪಿಎಸ್‍ಐಗಳಾದ ಶಿವಾನಂದ ನಾವದಗಿ, ಸತ್ಯಪ್ಪ ಹುಕ್ಕೇರಿ ಹಾಗೂ ಪ್ರೊಬೆಷನರಿ ಪಿಎಸ್‍ಐ ವಿಶ್ವನಾಥ ಅವರು ಭೆಟಿ ನೀಡಿ ಪರಿಶೀಲನೆ ನಡೆಸಿದರು


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ