ವಿಜಯಪುರ/ಹಾವೇರಿ: ರಾಜ್ಯದಲ್ಲಿ ಉಪಚುನಾವಣಾ ಕದನ ಜೋರಾಗಿದೆ. ಸಿಂದಗಿ, ಹಾನಗಲ್ ಕ್ಷೇತ್ರಗಳಿಂದ ಮೂರೂ ಪಕ್ಷದ ಅಭ್ಯರ್ಥಿಗಳು ಫೈನಲ್ ಆಗಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ.

ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ್ ಸಜ್ಜನರ್, ಕಾಂಗ್ರೆಸ್‍ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್‍ನಿಂದ ನಿಯಾಜ್ ಶೇಖ್ ಕಣದಲ್ಲಿದ್ರೆ. ಇತ್ತ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರು, ಕಾಂಗ್ರೆಸ್‍ನಿಂದ ಅಶೋಕ್ ಮನಗೂಳಿ, ಜೆಡಿಎಸ್‍ನಿಂದ ನಾಜಿಯಾ ಅಂಗಡಿ ಸ್ಪರ್ಧೆಗಿಳಿದಿದ್ದಾರೆ.

ನಿನ್ನೆಯಷ್ಟೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವುದರಿಂದ ಇಂದು ಬಿಜೆಪಿ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಬಿವೈ ವಿಜಯೇಂದ್ರ, ಸಚಿವ ಬಿಸಿ ಪಾಟೀಲ್ ಭಾಗಿಯಾಗಲಿದ್ದಾರೆ. ಸಿಂದಗಿಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಕೂಡ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ.

ಇಲ್ಲಿ ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಸಾಥ್ ನೀಡಲಿದ್ದಾರೆ. ಉಳಿದ ಅಭ್ಯರ್ಥಿಗಳು ಈಗಾಗ್ಲೇ ತಮ್ಮ ಪಕ್ಷದ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2ಕ್ಕೆ ಫಲಿತಾಂಶ ಹೊರಬೀಳಲಿದೆ.
Laxmi News 24×7