Breaking News

ಊಟ ಮಾಡಿ ಕುಳಿತ್ತಿದ್ದ ಸಹೋದರರ ಮೇಲೆ ಏಕಾಏಕಿ ಬಿದ್ದ ಗೋಡೆ : ಓರ್ವ ಸಾವು, ಇನ್ನೋರ್ವನಿಗೆ ಗಾಯ

Spread the love

ದಾವಣಗೆರೆ: ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ತೀವ್ರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿ, ಇನ್ನೊಬ್ಬರು ಗಾಯಗೊಂಡಿರುವ ಘಟನೆ ಗುರುವಾರ ದಾವಣಗೆರೆ ತಾಲೂಕಿನ ನರಗನಹಳ್ಳಿಯಲ್ಲಿ ಸಂಭವಿಸಿದೆ.

ನರಗನಹಳ್ಳಿ ಗ್ರಾಮದ ಮಂಜುನಾಥ್(48) ಮೃತಪಟ್ಟವರು. ಮೃತ ಮಂಜುನಾಥ್ ಸಹೋದರ ಪರಶುರಾಮ್ (42)ಎಂಬುವರು ಗಾಯಗೊಂಡಿದ್ದಾರೆ. ಮಧ್ಯಾಹ್ನ ಊಟ ಮಾಡಿದ ನಂತರ ಸಹೋದರರಿಬ್ಬರು ಮಾತನಾಡಿಕೊಂಡು ಕೂತಿದ್ದ ಸಂದರ್ಭದಲ್ಲಿ ಏಕಾಏಕಿ ಗೋಡೆ ಕುಸಿದು ಬಿದ್ದಿದೆ. ತೀವ್ರ ಗಾಯಗೊಂಡ ಮಂಜುನಾಥ್‌ನನ್ನು ಆಸ್ಪತ್ರೆಗೆ ಕರೆ ತರುವ ವೇಳೆ ದಾರಿ ಮಧ್ಯೆದಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಪರಶುರಾಮ್‌ನನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆ.ಎಸ್. ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗೋಡೆಗಳು ನೆನೆದಿದ್ದವು. ಮಂಜುನಾಥ್ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಽಕಾರಿಗಳು ಸ್ಥಳಕ್ಕೆ ಬರುವಂತೆ ಕುಟುಂಬಸ್ಥರು, ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ