ಬೆಂಗಳೂರು: ನಗರದಲ್ಲಿ ರಸ್ತೆಗುಂಡಿಗೆ ಸಾಮಾನ್ಯ ಜನರು ಬಲಿಯಾಗುತ್ತಿರುವ ದುರ್ಘಟನೆಗಳು ಮುಂದುವರೆದಿದ್ದು, ಇಂದು ಕೂಡ ಓರ್ವ ಮಹಿಳೆ ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಅಪಘಾತ ನಡೆದಿದ್ದು, ದ್ವಿ-ಚಕ್ರ ವಾಹನದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ಟಿಪ್ಪರ್ ಲಾರಿ ಹರಿದಿದೆ. ಒಂದೇ ಕುಟುಂಬದ ಮೂವರು ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ ರಸ್ತೆಗುಂಡಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯಲ್ಲಿ ಮಹಿಳೆ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ನಲ್ಲಿದ್ದ ಮತ್ತಿಬ್ಬರಿಗೂ ಗಂಭೀರ ಗಾಯಗೊಂಡಿದ್ದಾರೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7